ಚಾಮರಾಜನಗರ: ಯಾವನ್ ರೀ ಅವನು ಪ್ರತಾಪ್ ಸಿಂಹ ಇಲ್ಲಿ ಯಾಕೆ ಬಂದು ಪ್ರಚಾರ ಮಾಡುತ್ತಿದ್ದಾರೆ. ಇದು ಚಾಮರಾಜನಗರ ಲೋಕಸಭಾ ಕ್ಷೇತ್ರ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಕಿಡಿಕಾರಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರತಾಪ್ ಸಿಂಹ ಪ್ರತಿನಿಧಿಸುವ ಕ್ಷೇತ್ರ ವ್ಯಾಪ್ತಿಯಲ್ಲಿ ಅವರಿಗೆ ಸೋಲಿನ ಭಯ ಶುರುವಾಗಿದೆ. ಹೀಗಾಗಿ ಇಲ್ಲಿಗೆ ಬಂದು ಓಡಾಡುತ್ತಿದ್ದಾನೆ. ನನಗ್ಯಾಕೆ ಸೋಲಿನ ಭಯ. ಒಳ ಒಪ್ಪಂದ ಮಾಡಿಕೊಂಡವರು ಬಿಜೆಪಿ, ಜೆಡಿಎಸ್‍ನವರು. ಸಿಎಂ ಬಸವರಾಜ ಬೊಮ್ಮಾಯಿ ಅವರ ಕ್ಷೇತ್ರ ನೋಡಿಕೊಳ್ಳಿ. ನಾವು ಯಾರೊಂದಿಗೂ ಮೈತ್ರಿ ಮಾಡಿಕೊಂಡಿಲ್ಲ ಎಂದು ವಾಗ್ದಾಳಿ ನಡೆಸಿದರು.
ವರುಣಾ ಕ್ಷೇತ್ರ ಮತದಾರರು ಹಿಂದೆಂದಿಗಿಂತಲೂ ಹೆಚ್ಚಿನ ಪ್ರೀತಿ ವಿಶ್ವಾಸ ತೋರಿಸುತ್ತಿದ್ದಾರೆ. ಆ ಕಾರಣ ಚುನಾವಣೆಯಲ್ಲಿ ಅಂತಹ ವ್ಯತ್ಯಾಸ ಕಾಣಿಸುತ್ತಿಲ್ಲ. 1978ರಿಂದಲೂ ನಾನು ವರುಣಾ ಹೋಬಳಿ ಪ್ರತಿನಿಧಿಸುತ್ತಿದ್ದೇನೆ. ಇಲ್ಲಿನ ಜನ ನನ್ನ ಮೇಲೆ ಪ್ರೀತಿ ಇರಿಸಿಕೊಂಡಿದ್ದಾರೆ ಎಂದರು.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/EKLI3M1veVt0cQ8xLKb9B1
ಯೂಟ್ಯೂಬ್ ಚಾನೆಲ್ ಸಬ್ಸ್ ಕ್ರೈಬ್ ಆಗಿ: https://www.youtube.com/channel/UCtrQuDOToxHu8dzMaHjoYXA


