ಬೆಂಗಳೂರು: ಹೊಸ ವರ್ಷಾಚರಣೆಯ ವೇಳೆ ಯುವತಿಯೋರ್ವಳಿಗೆ ಕಿಡಿಗೇಡಿಗಳು ಕಿರುಕುಳ ನೀಡಿದ್ದು, ಈ ವೇಳೆ ಯುವತಿಯ ಗೆಳೆಯ ಹಾಗೂ ಕಿಡಿಗೇಡಿಗಳ ನಡುವೆ ಘರ್ಷಣೆ ನಡೆದಿದೆ ಎಂದು ವರದಿಯಾಗಿದೆ.
ಚರ್ಚ್ ಸ್ಟ್ರೀಟ್‌ನಲ್ಲಿ ಈ ಘಟನೆ ನಡೆದಿದ್ದು, ಪ್ರಿಯಕರನೊಂದಿಗೆ ಬಂದಿದ್ದ ಯುವತಿಯೊಬ್ಬಳಿಗೆ ಕಿಡಿಕೇಡಿಗಳು ಕಿರುಕುಳ ನೀಡಿದ್ದಾರೆ. ಈ ವೇಳೆ ಆಕೆಯ ಗೆಳೆಯ ದುಷ್ಕರ್ಮಿಗಳೊಂದಿಗೆ ಜಗಳಕ್ಕಿಳಿದಿದ್ದು, ಕೈಕೈ ಮಿಲಾಯಿಸಿದ್ದಾರೆ. ಆದರೆ, ಪೊಲೀಸರು ಬರುವಷ್ಟರದಲ್ಲಿ ಕಿಡಿಗೇಡಿಗಳು ಸ್ಥಳದಿಂದ ಪರಾರಿಯಾಗಿದ್ದಾರೆ ತಿಳಿದುಬಂದಿದೆ.
ಹೊಸ ವರ್ಷಾಚರಣೆ ಸಂಭ್ರಮದ ವೇಳೆ ಪಬ್ ಗಳಲ್ಲಿ ಭಾರೀ ಪ್ರಮಾಣದಲ್ಲಿ ಜನರು ಸೇರಿದ್ದರು. ಪಬ್ ನಲ್ಲಿ ಡಾನ್ಸ್ ಮಾಡುವುದನ್ನು ನೋಡಲು ಹೊರಗಡೆ ದೊಡ್ಡ ಜನಸಂದಣಿ ನಿಂತಿದ್ದು, ಈ ವೇಳೆ ಜನ ಸಂದಣಿಯನ್ನು ನಿಯಂತ್ರಿಸಲು ಪೊಲೀಸರು ಕೋರಮಂಗಲದಲ್ಲಿ ಲಾಠಿ ಚಾರ್ಜ್ ಮಾಡಿದ್ದಾರೆಂದು ವರದಿಯಾಗಿದೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz


