82ನೇ ವರ್ಷದಲ್ಲಿ ಪೋಕ್ಸೋ ಕೇಸ್ ಎದುರಿಸಿದ ಯಡಿಯೂರಪ್ಪ ನನ್ನ ಬಗ್ಗೆ ಮಾತನಾಡುವ ನೈತಿಕತೆ ಏನು ಉಳಿಸಿಕೊಂಡಿದ್ದಾರೆ ಅಂತ ಸಿಎಂ ಸಿದ್ದರಾಮಯ್ಯ ಮಾಜಿ ಸಿಎಂ ಬಿಎಸ್ ವೈ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
ನಮ್ಮ ಪಾದಯಾತ್ರೆ ಮುಗಿಯುವಷ್ಟರಲ್ಲಿ ಸಿದ್ದರಾಮಯ್ಯ ರಾಜೀನಾಮೆ ಕೊಡ್ತಾರೆ ಎಂಬ ಬಿಎಸ್ ಯಡಿಯೂರಪ್ಪ ಹೇಳಿಕೆಗೆ ಖಾರವಾಗಿ ಪ್ರತಿಕ್ರಿಯಿಸಿದ ಸಿದ್ದರಾಮಯ್ಯ, ಕೋರ್ಟ್ ದಯೆಯಿಂದ ಬಚಾವಾಗಿದ್ದಾರೆ ಅವರಿಗೆ ನನ್ನ ಬಗ್ಗೆ ಮಾತನಾಡುವ ನೈತಿಕತೆ ಏನಿದೆ. ಪೋಕ್ಸೋ ಕೇಸ್ ಎದುರಿಸಿದ ಇವರು ನನ್ನ ಬಗ್ಗೆ ಮಾತನಾಡೋದು ಸರೀನಾ? ಎಂದು ಪ್ರಶ್ನಿಸಿದ್ದಾರೆ.
82 ವರ್ಷ ವಯಸ್ಸಿನಲ್ಲಿ ಇದು ಬೇಕಿತ್ತಾ? ಯಡಿಯೂರಪ್ಪಗೆ ಯಾವ ನೈತಿಕತೆ ಇದೆ ನನ್ನ ಬಗ್ಗೆ ಮಾತನಾಡುವುದ್ದಕ್ಕೆ. ಯಡಿಯೂರಪ್ಪ ರಾಜಕೀಯ ಜೀವನದಿಂದ ನಿವೃತ್ತಿಯಾಗಬೇಕಿತ್ತು. ಅವರಿಗೆ ರಾಜಕೀಯ ನಿವೃತ್ತರಾಗಲು ಹೇಳಿ ಎಂದು ಖಡಕ್ ಪ್ರತಿಕ್ರಿಯೆ ನೀಡಿದರು.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296


