ಬೆಂಗಳೂರು: ಕರ್ನಾಟಕದ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ಮೊಮ್ಮಗಳು ಶುಕ್ರವಾರ ಬೆಳಗ್ಗೆ 10 ಗಂಟೆ ಸುಮಾರಿಗೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಫ್ಯಾನ್ ಗೆ ನೇಣು ಬಿಗಿದುಕೊಂಡು ಜೀವನ ಅಂತ್ಯಗೊಳಿಸಲು ಬಿಎಸ್ವೈ ಮೊಮ್ಮಗಳು ಕಠಿಣ ಹೆಜ್ಜೆ ಇಟ್ಟಿದ್ದಾಳೆ. ಪದ್ಮಾವತಿ ಅವರ ಪುತ್ರಿ ಸೌಂದರ್ಯ (30) ವೃತ್ತಿಯಲ್ಲಿ ವೈದ್ಯೆಯಾಗಿದ್ದು, ರಾಮಯ್ಯ ಆಸ್ಪತ್ರೆಯಲ್ಲಿ ಕೆಲಸ ಮಾಡುತ್ತಿದ್ದರು.
ಹೈಗ್ರೌಂಡ್ಸ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಮೃತದೇಹವನ್ನು ಬೆಂಗಳೂರಿನ ಬೌರಿಂಗ್ ಆಸ್ಪತ್ರೆಗೆ ರವಾನಿಸಲಾಗಿದೆ.
ವಸಂತನಗರದ ಮೌಂಟ್ ಕಾರ್ಮೆಲ್ ಕಾಲೇಜು ಬಳಿಯ ಫ್ಲಾಟ್ ನಲ್ಲಿ ಸೌಂದರ್ಯ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಅವರು 2018 ರಲ್ಲಿ ಡಾ.ನೀರಜ್ ಅವರನ್ನು ವಿವಾಹವಾದರು ಮತ್ತು ದಂಪತಿಗೆ ಒಂದು ಮಗುವಿದೆ.
ಡೋರ್ ಬೆಲ್ ಮಾಡಿದ ವೇಳೆ ಸೌಂದರ್ಯ ಅವರಿಂದ ಯಾವುದೇ ಪ್ರತಿಕ್ರಿಯೆ ಬಂದಿರಲಿಲ್ಲ. ಹೀಗಾಗಿ ಮನೆಯ ಕೆಲಸಗಾರ ಡಾ.ನೀರಜ್ ಗೆ ಕರೆ ಮಾಡಿದ್ದು, ಈ ವೇಳೆ ಘಟನೆ ಬೆಳಕಿಗೆ ಬಂದಿದೆ.
ವರದಿ: ಆಂಟೋನಿ ಬೇಗೂರು
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy