ವಿಜಯನಗರ: ನಮ್ಮ ಪಕ್ಷ ಅಧಿಕಾರಕ್ಕೆ ಬಂದರೆ ಬಿಜೆಪಿ ‘ಬಿ’ ರಿಪೋರ್ಟ್ ಹಾಕಿದ ಎಲ್ಲಾ ಪ್ರಕರಣಗಳನ್ನು ಮರು ತನಿಖೆ ನಡೆಸುತ್ತೇವೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.
ನಗರದಲ್ಲಿ ನಡೆದ ಪ್ರಜಾಧ್ವನಿ ಬಸ್ ಯಾತ್ರೆ ವೇಳೆ ಮಾತನಾಡಿದ ಅವರು, ರಾಜ್ಯ ಸರ್ಕಾರ ಪ್ರತಿಯೊಂದು ಪ್ರಕರಣಕ್ಕೂ ‘ಬಿ’ ರಿಪೋರ್ಟ್ ಹಾಕುತ್ತಿದೆ. ಮುಂದಿನ ಚುನಾವಣೆಯಲ್ಲಿ ನಮ್ಮ ಪಕ್ಷ ಅಧಿಕಾರಕ್ಕೆ ಬಂದರೆ ‘ಬಿ’ ರಿಪೋರ್ಟ್ ಹಾಕಿದ ಎಲ್ಲಾ ಪ್ರಕರಣವನ್ನು ಮರು ತನಿಖೆ ನಡೆಸಲಾಗುತ್ತದೆ ಎಂದಿದ್ದಾರೆ.
ಆಪರೇಷನ್ ಕಮಲದ ಮೂಲಕ ಅಧಿಕಾರಕ್ಕೆ ಬಂದಿರುವ ಸರ್ಕಾರ ಜನರಿಗೆ ಏನು ಕೊಟ್ಟಿದೆ. 600 ಭರವಸೆಗಳಲ್ಲಿ ಶೇ.10 ರಷ್ಟು ಮಾಡಲು ಸಾಧ್ಯವಾಗಿಲ್ಲ ಎಂದು ಕಿಡಿಕಾರಿದರು.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/EKLI3M1veVt0cQ8xLKb9B1


