nammatumakuru

    Subscribe to Updates

    Get the latest creative news from FooBar about art, design and business.

    What's Hot

    ಆಟವಾಡುತ್ತಿದ್ದ ಬಾಲಕಿಯನ್ನು ಕರೆದೊಯ್ದು ಲೈಂಗಿಕ ದೌರ್ಜನ್ಯ: ಇಬ್ಬರು ಅಪ್ರಾಪ್ತ ಬಾಲಕರು ವಶಕ್ಕೆ 

    June 24, 2025

    ಬಡವರ ಹಣ ಪಡೆದ್ರೆ ನಮ್ಮ ಮಕ್ಕಳಿಗೆ ಒಳ್ಳೆದಾಗುತ್ತಾ?: ಸಚಿವ ಜಮೀರ್ ಅಹ್ಮದ್ ಹೇಳಿದ್ದೇನು?

    June 24, 2025

    ಏಳು ಪ್ರಮುಖ ಮಸೂದೆಗಳಿಗೆ ಅನುಮೋದನೆ ನೀಡಲು ರಾಷ್ಟ್ರಪತಿಗೆ ಸಿಎಂ ಸಿದ್ದರಾಮಯ್ಯ ಮನವಿ

    June 24, 2025
    Facebook Twitter Instagram
    ಟ್ರೆಂಡಿಂಗ್
    • ಆಟವಾಡುತ್ತಿದ್ದ ಬಾಲಕಿಯನ್ನು ಕರೆದೊಯ್ದು ಲೈಂಗಿಕ ದೌರ್ಜನ್ಯ: ಇಬ್ಬರು ಅಪ್ರಾಪ್ತ ಬಾಲಕರು ವಶಕ್ಕೆ 
    • ಬಡವರ ಹಣ ಪಡೆದ್ರೆ ನಮ್ಮ ಮಕ್ಕಳಿಗೆ ಒಳ್ಳೆದಾಗುತ್ತಾ?: ಸಚಿವ ಜಮೀರ್ ಅಹ್ಮದ್ ಹೇಳಿದ್ದೇನು?
    • ಏಳು ಪ್ರಮುಖ ಮಸೂದೆಗಳಿಗೆ ಅನುಮೋದನೆ ನೀಡಲು ರಾಷ್ಟ್ರಪತಿಗೆ ಸಿಎಂ ಸಿದ್ದರಾಮಯ್ಯ ಮನವಿ
    • ದುಡ್ಡಿಲ್ಲ ಅಂತ ಯಾರು ಹೇಳಿದ್ದು?, ನಾನು ತಮಾಷೆಗೆ ಹೇಳಿದ್ದೇನೆ: ಸಚಿವ ಪರಮೇಶ್ವರ್
    • ಒಂದು ಇಲಾಖೆಯಲ್ಲಿನ ತಪ್ಪಿಗೆ ಇಡೀ ಸರ್ಕಾರವನ್ನು ದೂಷಿಸುವುದು ಸರಿಯಲ್ಲ: ಸಚಿವ ಪರಮೇಶ್ವರ್
    • 24 ಬಾಲಕಿಯರಿಗೆ ಲೈಂಗಿಕ ಕಿರುಕುಳ: ಶಿಕ್ಷಕನ ಬಂಧನ
    • ರಾಜ್ಯಾದ್ಯಂತ 50 ಲಕ್ಷ ಸದಸ್ಯತ್ವ ನೋಂದಣಿ ಗುರಿ: ಜೆಡಿಎಸ್ ಮುಖಂಡ ಕೆ.ಟಿ.ಶಾಂತಕುಮಾರ್
    • ಭಾರತವನ್ನು ಬೆಂಬಲಿಸಿದ್ದ ಇರಾನ್: ಇರಾನ್ ರಾಷ್ಟ್ರವನ್ನು ಭಾರತ ಬೆಂಬಲಿಸಬೇಕು: ಮಲ್ಲಿಕಾರ್ಜುನ ಖರ್ಗೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಗುಡುಗು–ಸಿಡಿಲು ಸಹಿತ ಮಳೆ ಸಾಧ್ಯತೆ:  ತುಮಕೂರಿನಲ್ಲಿ ಯಲ್ಲೋ ಅಲರ್ಟ್ ಘೋಷಣೆ– ಜಿಲ್ಲಾಧಿಕಾರಿ
    ತುಮಕೂರು November 30, 2024

    ಗುಡುಗು–ಸಿಡಿಲು ಸಹಿತ ಮಳೆ ಸಾಧ್ಯತೆ:  ತುಮಕೂರಿನಲ್ಲಿ ಯಲ್ಲೋ ಅಲರ್ಟ್ ಘೋಷಣೆ– ಜಿಲ್ಲಾಧಿಕಾರಿ

    By adminNovember 30, 2024No Comments2 Mins Read
    shubha kalyan

    ತುಮಕೂರು :  ಭಾರತೀಯ ಹವಾಮಾನ ಇಲಾಖೆ ವರದಿಯನ್ವಯ ಗುಡುಗು–ಸಿಡಿಲು ಸಹಿತ ಮಳೆಯಾಗುವ ಮುನ್ಸೂಚನೆ ಇರುವುದರಿಂದ ಮುಂದಿನ 4 ದಿನಗಳ ಕಾಲ ಜಿಲ್ಲೆಯಲ್ಲಿ ಯಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ ಎಂದು ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತಿಳಿಸಿದ್ದಾರೆ.

    ಮುಂಜಾಗ್ರತೆ ವಹಿಸಲು ಅಧಿಕಾರಿ ಸಿಬ್ಬಂದಿಗೆ ಸೂಚನೆ :


    Provided by

    ಭಾರೀ ಮಳೆಯಿಂದ ಉಂಟಾಗಬಹುದಾದ ಪ್ರವಾಹದಿಂದ ಯಾವುದೇ ಜನ–ಜಾನುವಾರುಗಳ ಜೀವಹಾನಿಯಾಗದಂತೆ ಜಿಲ್ಲಾ/ತಾಲ್ಲೂಕು/ಗ್ರಾಮ ಮಟ್ಟದ ಅಧಿಕಾರಿ/ಸಿಬ್ಬಂದಿಗಳು ಕೇಂದ್ರಸ್ಥಾನದಲ್ಲಿದ್ದುಕೊಂಡು ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಬೇಕು. ತುರ್ತು ಚಿಕಿತ್ಸೆಗಾಗಿ ಹತ್ತಿರದ ಆರೋಗ್ಯ ಕೇಂದ್ರಗಳ ಮಾಹಿತಿ ಹೊಂದಿರಬೇಕೆಂದು ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

    ಭಾರೀ ಮಳೆ/ಪ್ರವಾಹದಿಂದ ಯಾವುದೇ ಅಹಿತಕರ ಘಟನೆಯಾಗದಂತೆ ಮಳೆ ಮುನ್ನಚ್ಚರಿಕೆ ಬಗ್ಗೆ ಪ್ರತಿ ಗ್ರಾಮಗಳಲ್ಲಿ ಡಂಗುರ ಸಾರಬೇಕು ಹಾಗೂ ಮೈಕ್ ಮೂಲಕ ಜಾಗೃತಿ ಮೂಡಿಸಬೇಕು. ನಿರಂತರ ಮಳೆಯಿಂದ ಅಪಾಯವಿರುವ ಮನೆ, ಗೋಡೆ ಇತರೆ ಕಟ್ಟಡಗಳು ಕುಸಿಯುವ ಸಂಭವವಿರುತ್ತದೆ. ಇದರಿಂದ ಸಾವು–ನೋವುಗಳು ಉಂಟಾಗಬಹುದಾದ್ದರಿಂದ ಸಾರ್ವಜನಿಕರಿಗೆ ಸುರಕ್ಷತಾ ಕ್ರಮಗಳನ್ನು ಕೈಗೊಳ್ಳುವ ಬಗ್ಗೆ ತಿಳಿ ಹೇಳಬೇಕು ಎಂದು ತಿಳಿಸಿದ್ದಾರೆ.

    ಜಿಲ್ಲಾ/ತಾಲ್ಲೂಕು/ಗ್ರಾಮ ಮಟ್ಟದ ಅಧಿಕಾರಿ, ಸಿಬ್ಬಂದಿ ಕೇಂದ್ರಸ್ಥಾನದಲ್ಲಿದ್ದುಕೊಂಡು ಮಳೆಯಿಂದ ಯಾವುದೇ ಜನ-ಜಾನುವಾರುಗಳ ಜೀವಹಾನಿಯಾಗದಂತೆ ಮುಂಜಾಗ್ರತೆ ವಹಿಸಬೇಕು. ನಿರಂತರ ಮಳೆಯಿಂದ ದುರ್ಬಲ ಮಣ್ಣಿನ ಮನೆ/ಕಟ್ಟಡ, ದುರ್ಬಲ ಮರದ ಕೊಂಬೆ, ಜಲಕಾಯ/ವಿದ್ಯುತ್ ವಸ್ತುಗಳಿಂದ ದೂರವಿರುವ ಬಗ್ಗೆ ವ್ಯಾಪಕ ಪ್ರಚಾರ ನೀಡಬೇಕು. ಶಾಲೆ/ಅಂಗನವಾಡಿ ಮೇಲ್ಛಾವಣಿ/ಗೋಡೆಗಳು ಸುಸ್ಥಿತಿಯಲ್ಲಿರುವ ಬಗ್ಗೆ ಪರಿಶೀಲಿಸಬೇಕು. ಹಠಾತ್ ಪ್ರವಾಹವಾಗುವ ತಗ್ಗು ಪ್ರದೇಶದ ಕೆಳ ಸೇತುವೆ ರಸ್ತೆಗಳ ಬಗ್ಗೆ ಮುನ್ನೆಚ್ಚರಿಕೆ ವಹಿಸಬೇಕು ಎಂದು ನಿರ್ದೇಶನ ನೀಡಿದ್ದಾರೆ.

    ಸಿಡಿಲು ಸಹಿತ ಮಳೆಯಾಗುವ ಸಾಧ್ಯತೆ ಇರುವುದರಿಂದ ರಾಜ್ಯ/ಜಿಲ್ಲಾಡಳಿತ/ತಾಲ್ಲೂಕು ಆಡಳಿತದಿಂದ ನೀಡುವ ಹವಾಮಾನದ ಮುನ್ನೆಚ್ಚರಿಕೆಯನ್ನು ಗ್ರಾಮ ಪಂಚಾಯತಿಯ ವಿಪತ್ತು ನಿರ್ವಹಣಾ ಸಮಿತಿಗಳು ಪ್ರತಿ ಗ್ರಾಮಗಳಲ್ಲಿ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಬೇಕೆಂದು ಸೂಚಿಸಿದ್ದಾರೆ.

    ಸಾರ್ವಜನಿಕರಲ್ಲಿ ಮನವಿ:

    ಜಿಲ್ಲೆಯಲ್ಲಿ ಮುಂದಿನ 4 ದಿನಗಳ ಕಾಲ ಭಾರಿ ಮಳೆಯಾಗುವ ಮುನ್ಸೂಚನೆ ಇರುವುದರಿಂದ ನದಿ/ಹಳ್ಳದ/ಕೆರೆ ದಡದಲ್ಲಿ ಬಟ್ಟೆ ತೊಳೆಯುವುದು, ಈಜಾಡುವುದು, ದನ/ಕರುಗಳನ್ನು ಮೇಯಿಸುವುದು, ಅಪಾಯವಿರುವ ಸೇತುವೆಗಳ ಮೇಲೆ ಸಂಚರಿಸುವುದು, ಮತ್ತಿತರೆ ಚಟುವಟಿಕೆಗಳನ್ನು ನಡೆಸಬಾರದು. ನದಿ/ಹಳ್ಳ/ಕೆರೆ ದಡಗಳಲ್ಲಿ ಅಪಾಯವಿರುವ ಸೇತುವೆಗಳಲ್ಲಿ ಪೋಟೋ/ಸೆಲ್ಫಿಗಳನ್ನು ತೆಗೆಯಬಾರದು. ಮಕ್ಕಳು ಮತ್ತು ವಯೋವೃದ್ಧರನ್ನು ಮನೆಯಿಂದ ಹೊರಗಡೆ ಒಂಟಿಯಾಗಿ ತೆರಳದಂತೆ ಎಚ್ಚರಿಕೆ ವಹಿಸಬೇಕು. ಗುಡುಗು-ಮಿಂಚು, ಸಿಡಿಲು ಬಡಿಯುವ ಸಂದರ್ಭದಲ್ಲಿ ಮನೆಯ ಹೊರಗಡೆ ಇರುವವರು ತುರ್ತಾಗಿ ಸುರಕ್ಷಿತವಾದ ತಗ್ಗು ಪ್ರದೇಶಕ್ಕೆ ತೆರಳಿ ರಕ್ಷಣೆ ಪಡೆದುಕೊಳ್ಳಬೇಕು. ಮರ, ವಿದ್ಯುತ್ ಕಂಬ, ಜಲಾಶಯ ಇತರೆ ಪ್ರತ್ಯೇಕ ವಸ್ತುಗಳಿಂದ ದೂರವಿರಬೇಕು. ಮಿಂಚು ಒಬ್ಬರಿಂದ ಒಬ್ಬರಿಗೆ ಸಂಚರಿಸದಂತೆ ಜನ ಸಂದಣಿಯಾಗದಂತೆ ಅಂತರ ಕಾಪಾಡಿಕೊಳ್ಳಬೇಕು ಎಂದು ಸಾರ್ವಜನಿಕರಲ್ಲಿ ಮನವಿ ಮಾಡಿದ್ದಾರೆ.

    ಕೆರೆ–ಕಟ್ಟೆಗಳ ಏರಿ/ಬಂಡ್/ಕೋಡಿಗಳಲ್ಲಿ ನೀರು ಸೋರಿಕೆ ಕಂಡು ಬಂದಲ್ಲಿ, ರಸ್ತೆಗಳ ಮೇಲೆ ಅಪಾಯಕಾರಿ ಮಟ್ಟದಲ್ಲಿ ನೀರು ಹರಿಯುತ್ತಿದ್ದಲ್ಲಿ/ನಿಂತಿದಲ್ಲಿ, ಮರ ಬಿದ್ದು ವಾಹನ ಸಂಚಾರ ಸ್ಥಗಿತವಾಗಿದ್ದಲ್ಲಿ, ವಿದ್ಯುತ್ ಲೈನ್/ಕಂಬ ಬಿದ್ದಿದ್ದಲ್ಲಿ, ಮನೆಯೊಳಗಡೆ ನೀರು ನುಗ್ಗಿದಲ್ಲಿ, ಮನೆ ಗೋಡೆ/ಮೇಲ್ಛಾವಣಿ ಬಿದ್ದಿದ್ದಲ್ಲಿ, ಬೆಳೆ ನಷ್ಟವಾಗಿದ್ದಲ್ಲಿ, ಇತರೆ ತುರ್ತು ಪರಿಸ್ಥಿತಿಗಳಲ್ಲಿ ಸಾರ್ವಜನಿಕರು ಸಹಾಯವಾಣಿ ಸಂಖ್ಯೆಗಳಾದ 7304975519, 0816–2213400, 155304ಕ್ಕೆ ಕರೆ ಮಾಡಿ ನೆರವು ಪಡೆಯಬಹುದಾಗಿದೆ ಎಂದು ಅವರು ತಿಳಿಸಿದ್ದಾರೆ.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/HirBanj7uz4I4A2vAG5yXx

    admin
    • Website

    Related Posts

    ಆಟವಾಡುತ್ತಿದ್ದ ಬಾಲಕಿಯನ್ನು ಕರೆದೊಯ್ದು ಲೈಂಗಿಕ ದೌರ್ಜನ್ಯ: ಇಬ್ಬರು ಅಪ್ರಾಪ್ತ ಬಾಲಕರು ವಶಕ್ಕೆ 

    June 24, 2025

    ರಾಜ್ಯಾದ್ಯಂತ 50 ಲಕ್ಷ ಸದಸ್ಯತ್ವ ನೋಂದಣಿ ಗುರಿ: ಜೆಡಿಎಸ್ ಮುಖಂಡ ಕೆ.ಟಿ.ಶಾಂತಕುಮಾರ್

    June 24, 2025

    8,000 ಪೊಲೀಸ್ ಕಾನ್ ಸ್ಟೆಬಲ್ ಹುದ್ದೆ ಶೀಘ್ರವೇ ಭರ್ತಿ

    June 23, 2025
    Our Picks

    ಏಳು ಪ್ರಮುಖ ಮಸೂದೆಗಳಿಗೆ ಅನುಮೋದನೆ ನೀಡಲು ರಾಷ್ಟ್ರಪತಿಗೆ ಸಿಎಂ ಸಿದ್ದರಾಮಯ್ಯ ಮನವಿ

    June 24, 2025

    24 ಬಾಲಕಿಯರಿಗೆ ಲೈಂಗಿಕ ಕಿರುಕುಳ: ಶಿಕ್ಷಕನ ಬಂಧನ

    June 24, 2025

    ಇಸ್ರೇಲ್– ಇರಾನ್ ಯುದ್ಧಕ್ಕೆ ಅಮೆರಿಕ ಎಂಟ್ರಿ: ಇರಾನ್ ಅನುಸ್ಥಾವರಗಳ ಮೇಲೆ ಅಮೆರಿಕ ದಾಳಿ

    June 22, 2025

    ಬೆಂಗಳೂರಿಗೆ ಆಗಮಿಸಿ ಕೇಂದ್ರ ಗೃಹ ಸಚಿವ ಅಮಿತ್ ಶಾ

    June 20, 2025
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    ಆಟವಾಡುತ್ತಿದ್ದ ಬಾಲಕಿಯನ್ನು ಕರೆದೊಯ್ದು ಲೈಂಗಿಕ ದೌರ್ಜನ್ಯ: ಇಬ್ಬರು ಅಪ್ರಾಪ್ತ ಬಾಲಕರು ವಶಕ್ಕೆ 

    June 24, 2025

    ದಾವಣಗೆರೆ: ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ ಘಟನೆ ದಾವಣಗೆರೆ ತಾಲೂಕಿನ ಗ್ರಾಮವೊಂದರಲ್ಲಿ ಭಾನುವಾರ ನಡೆದಿದೆ. ಘಟನೆಗೆ ಸಂಬಂಧಿಸಿದಂತೆ ಇಬ್ಬರು…

    ಬಡವರ ಹಣ ಪಡೆದ್ರೆ ನಮ್ಮ ಮಕ್ಕಳಿಗೆ ಒಳ್ಳೆದಾಗುತ್ತಾ?: ಸಚಿವ ಜಮೀರ್ ಅಹ್ಮದ್ ಹೇಳಿದ್ದೇನು?

    June 24, 2025

    ಏಳು ಪ್ರಮುಖ ಮಸೂದೆಗಳಿಗೆ ಅನುಮೋದನೆ ನೀಡಲು ರಾಷ್ಟ್ರಪತಿಗೆ ಸಿಎಂ ಸಿದ್ದರಾಮಯ್ಯ ಮನವಿ

    June 24, 2025

    ದುಡ್ಡಿಲ್ಲ ಅಂತ ಯಾರು ಹೇಳಿದ್ದು?, ನಾನು ತಮಾಷೆಗೆ ಹೇಳಿದ್ದೇನೆ: ಸಚಿವ ಪರಮೇಶ್ವರ್

    June 24, 2025

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2025 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.