ಶಿವಮೊಗ್ಗ: ಏನು ತಪ್ಪು ಮಾಡಿ ತಿಹಾರ್ ಜೈಲಿಗೆ ಹೋಗಿದ್ರಿ ಮೊದಲು ಹೇಳಿ ಎಂದು ಶಿವಮೊಗ್ಗದಲ್ಲಿ ಗ್ರಾಮೀಣಾಭಿವೃದ್ದಿ ಸಚಿವ ಕೆ.ಎಸ್.ಈಶ್ವರಪ್ಪ ವಾಗ್ದಾಳಿ ನಡೆಸಿದ್ದು, ಡಿ.ಕೆ.ಶಿವಕುಮಾರ್ ತಿಹಾರ್ ಜೈಲಿಗೆ ಏಕೆ ಹೋಗಿದ್ದರು? ಅವರು ಏನು ತಪ್ಪು ಮಾಡಿದ್ದರು ಎಂಬುದನ್ನು ಹೇಳಬೇಕು ಎಂದು ಅವರು ಪ್ರಶ್ನಿಸಿದ್ದಾರೆ.
ಏನ್ ತಪ್ಪು ಮಾಡಿ ತಿಹಾರ್ ಜೈಲಿಗೆ ಹೋಗಿದ್ರಿ ಎಂದು ಮೊದಲು ಹೇಳಿ. ಹೆತ್ತ ತಾಯಿ ಕಣ್ಣೀರಿನ ಶಾಪ ಯಾರಿಗೆ ತಟ್ಟುತ್ತದೆ. ತಾಯಿಗೆ ಕಣ್ಣೀರು ಹಾಕಿಸಿದ್ದು ಯಾರ ತಪ್ಪು ಉತ್ತರಸಲಿ. ಡಿಕೆಶಿ ಬಂಡೆಯಲ್ಲಿ ಎಷ್ಟು ದುಡ್ಡು ಮಾಡಿದ್ದಾರೆ ಎಂದು ಗೊತ್ತಿದೆ ನಮ್ಮನ್ನು ಹೊಗಳಿದ ಡಿಕೆಶಿಗೆ ಧನ್ಯವಾದಗಳು ಎಂದು ಡಿ.ಕೆ.ಶಿವಕುಮಾರ್ ವಿರುದ್ಧ ಈಶ್ವರಪ್ಪ ಕಿಡಿಕಾರಿದರು.
ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅಜ್ಞಾನಿ. ನನ್ನ ಇಲಾಖೆಯ ಸಾಧನೆ ಕುರಿತು ಪ್ರಶ್ನೆ ಹಾಕಿದ್ದಾರೆ. ಒಂದೇ ಒಂದು ಮನೆ ಕೊಟ್ಟಿಲ್ಲ ಎಂದು ಆರೋಪಿಸಿದ್ದಾರೆ. ಮನೆ ಕೊಡುವುದು ವಸತಿ ಇಲಾಖೆ. ನನ್ನ ಇಲಾಖೆಯಲ್ಲಿ ಮನೆ ಹಂಚಲು, ಕಟ್ಟಲು ಬರುವುದಿಲ್ಲ. ನನ್ನನ್ನು ಟೀಕಿಸದಿದ್ದರೆ ಅವರಿಗೆ ತಿಂದಿದ್ದು ಕರಗುವುದಿಲ್ಲ ಎಂದಿದ್ದಾರೆ ಎಂದು ಸಿದ್ದರಾಮಯ್ಯ ವಿರುದ್ಧವೂ ಅವರು ಕಿಡಿಕಾರಿದರು.
ನಿಮ್ಮ ಸುದ್ದಿಗಳನ್ನು ಕಳುಹಿಸಿ: nammatumakuru9@gmail.com
ವಾಟ್ಸಾಪ್ ಗ್ರೂಪ್ ಸೇರಿ:
https://chat.whatsapp.com/E7Brl0d8zXCJogP6c6GRcZ
ಜಾಹೀರಾತುಗಳಿಗಾಗಿ ಸಂಪರ್ಕಿಸಿ: 97417 17700