nammatumakuru

    Subscribe to Updates

    Get the latest creative news from FooBar about art, design and business.

    What's Hot

    ಕೋಳಾಲ ಗ್ರಾಮದಲ್ಲಿ ಪ್ರಜಾಸೇವಾ ಅಭಿಯಾನ: ಜನಸಭೆಯಲ್ಲಿ 150 ಅರ್ಜಿ ಸ್ವೀಕಾರ

    September 13, 2026

    ಬೆಂಗಳೂರಿನಲ್ಲಿ ರಾಷ್ಟ್ರೀಯ ಅಹಿಂದ ಸಂಘಟನೆಯ ಪದಗ್ರಹಣ ಮತ್ತು ಸನ್ಮಾನ ಕಾರ್ಯಕ್ರಮ ಯಶಸ್ವಿ

    September 13, 2026

    ಪತ್ನಿ ಜತೆಗಿನ ಕಲಹ: ಬಳ್ಳಾರಿಯಲ್ಲಿ ಪೊಲೀಸ್ ಠಾಣೆ ಎದುರು ವಿದ್ಯುತ್ ಟ್ರಾನ್ಸ್‌ ಫಾರ್ಮರ್ ಏರಿದ ವ್ಯಕ್ತಿ!

    September 13, 2026
    Facebook Twitter Instagram
    ಟ್ರೆಂಡಿಂಗ್
    • ಕೋಳಾಲ ಗ್ರಾಮದಲ್ಲಿ ಪ್ರಜಾಸೇವಾ ಅಭಿಯಾನ: ಜನಸಭೆಯಲ್ಲಿ 150 ಅರ್ಜಿ ಸ್ವೀಕಾರ
    • ಬೆಂಗಳೂರಿನಲ್ಲಿ ರಾಷ್ಟ್ರೀಯ ಅಹಿಂದ ಸಂಘಟನೆಯ ಪದಗ್ರಹಣ ಮತ್ತು ಸನ್ಮಾನ ಕಾರ್ಯಕ್ರಮ ಯಶಸ್ವಿ
    • ಪತ್ನಿ ಜತೆಗಿನ ಕಲಹ: ಬಳ್ಳಾರಿಯಲ್ಲಿ ಪೊಲೀಸ್ ಠಾಣೆ ಎದುರು ವಿದ್ಯುತ್ ಟ್ರಾನ್ಸ್‌ ಫಾರ್ಮರ್ ಏರಿದ ವ್ಯಕ್ತಿ!
    • ಪೊಲೀಸ್ ಠಾಣೆಗೆ ನುಗ್ಗಿದ್ರೆ ಸೀದಾ ಪರಪ್ಪನ ಅಗ್ರಹಾರಕ್ಕೆ ಕಳಿಸ್ತೀವಿ; ಪ್ರತಾಪ್ ಸಿಂಹಗೆ ಪ್ರಿಯಾಂಕ್ ಖರ್ಗೆ ಖಡಕ್ ವಾರ್ನಿಂಗ್
    • ತಂಗಿ ಜೊತೆ ಅನೈತಿಕ ಸಂಬಂಧ ಶಂಕೆ; ಊಟ ಮಾಡುತ್ತಿದ್ದಾಗಲೇ ಮಚ್ಚಿನಿಂದ ಕೊಚ್ಚಿ ಯುವಕನ ಭೀಕರ ಹತ್ಯೆ
    • ಸಚಿವ ಸತೀಶ್ ಜಾರಕಿಹೊಳಿ ಸಂಪುಟದಿಂದ ವಜಾಗೊಳಿಸುವಂತೆ ಬಿಜೆಪಿ ಆಗ್ರಹ: ಆರ್. ಅಶೋಕ್ ತೀವ್ರ ವಾಗ್ದಾಳಿ
    • ಹುಬ್ಬಳ್ಳಿ: ಗಣೇಶ ಮೆರವಣಿಗೆಯಲ್ಲಿ ಮಹಿಳೆಯರ ಜೊತೆ ಅಸಭ್ಯ ವರ್ತನೆ – ಕಿಡಿಗೇಡಿಗಳಿಗೆ ಪೊಲೀಸರಿಂದ ಲಾಠಿ ರುಚಿ
    • ಬೀದರ್ ನಗರಾಭಿವೃದ್ಧಿ ಪ್ರಾಧಿಕಾರಕ್ಕೆ ವಿನೋದ ಅಪ್ಪೆ ನೂತನ ಅಧ್ಯಕ್ಷ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಎತ್ತಿನಹೊಳೆ ಯೋಜನೆ : ಆಗಸ್ಟ್ ಮಾಹೆಯೊಳಗೆ ಪೂರ್ಣಗೊಳಿಸಲು ಸೂಚನೆ
    ತುಮಕೂರು February 22, 2025

    ಎತ್ತಿನಹೊಳೆ ಯೋಜನೆ : ಆಗಸ್ಟ್ ಮಾಹೆಯೊಳಗೆ ಪೂರ್ಣಗೊಳಿಸಲು ಸೂಚನೆ

    By adminFebruary 22, 2025No Comments2 Mins Read
    parameshwar

    ತುಮಕೂರು:  ಜಿಲ್ಲೆಯಲ್ಲಿ ಎತ್ತಿನಹೊಳೆ ಯೋಜನೆಯನ್ನು ಆಗಸ್ಟ್ ಮಾಹೆಯೊಳಗೆ ಪೂರ್ಣಗೊಳಿಸಬೇಕೆಂದು ಗೃಹ ಸಚಿವ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ.ಜಿ.ಪರಮೇಶ್ವರ ಅವರು ಸೂಚನೆ ನೀಡಿದರು.

    ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಶುಕ್ರವಾರ ಸಂಜೆ ಎತ್ತಿನಹೊಳೆ, ರೈಲ್ವೆ, ಹೇಮಾವತಿ, ಕೆಐಎಡಿಬಿ, ಭದ್ರಾ ಮೇಲ್ದಂಡೆ ಯೋಜನೆಗಳಿಗೆ ಸಂಬಂಧಿಸಿದಂತೆ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಮಾತನಾಡಿದ ಅವರು, ಜಿಲ್ಲೆಯಲ್ಲಿ ಎತ್ತಿನಹೊಳೆ ಯೋಜನೆಗಾಗಿ ಈವರೆಗೂ 2679 ಎಕರೆ ಭೂಸ್ವಾಧೀನವಾಗಿದ್ದು, ಯೋಜನೆಗೆ ಅವಶ್ಯವಿರುವ ಉಳಿದ 438 ಎಕರೆ ಭೂಮಿಯನ್ನು 4 ತಿಂಗಳೊಳಗಾಗಿ ಸ್ವಾಧೀನಪಡಿಸಿಕೊಂಡು ಎತ್ತಿನ ಹೊಳೆ ಯೋಜನೆಗೆ ಹಸ್ತಾಂತರಿಸಬೇಕೆಂದು ವಿಶೇಷ ಭೂಸ್ವಾಧೀನಾಧಿಕಾರಿ ಮಂಜುನಾಥ್ ಜಿ.ಎನ್. ಅವರಿಗೆ ಸೂಚನೆ ನೀಡಿದರು.

    ಲಭ್ಯವಿರುವ ಅನುದಾನವನ್ನು ಭೂಮಾಲೀಕರಿಗೆ ಪಾವತಿಸಿ ಎತ್ತಿನ ಹೊಳೆ ಯೋಜನೆಯನ್ನು ಆಗಸ್ಟ್ ಮಾಹೆಯೊಳಗೆ ಪೂರ್ಣಗೊಳಿಸಬೇಕೆಂದು ಕಾರ್ಯನಿರ್ವಾಹಕ ಇಂಜಿನಿಯರ್ ಮುರಳೀಧರ್ ಅವರಿಗೆ ಕಟ್ಟುನಿಟ್ಟಿನ ನಿರ್ದೇಶನ ನೀಡಿದರು.

    ಎತ್ತಿನ ಹೊಳೆ ಯೋಜನೆಯ ಕಾರ್ಯನಿರ್ವಾಹಕ ಇಂಜಿನಿಯರ್ ಮುರಳೀಧರ್ ಸಚಿವರಿಗೆ ಮಾಹಿತಿ ನೀಡುತ್ತಾ, ಯೋಜನೆಯಡಿ ಜಿಲ್ಲೆಯಲ್ಲಿ 150 ಕಿ.ಮೀ. ಗುರುತ್ವಾ ಕಾಲುವೆಯನ್ನು ಹೊಂದಿದ್ದು, ಇದರಲ್ಲಿ 115 ಕಿ.ಮೀ.ವರೆಗಿನ ಕಾಮಗಾರಿ ಮುಕ್ತಾಯ ಹಂತದಲ್ಲಿದೆ. ಉಳಿದ 24 ಕಿ.ಮೀ.ನಲ್ಲಿ ಕಾಮಗಾರಿ ಪ್ರಗತಿಯಲ್ಲಿದೆ ಹಾಗೂ 3 ಕಡೆ ಅರಣ್ಯ ಪ್ರದೇಶದ ಸಮಸ್ಯೆಯಿದ್ದು, ಅಧಿಕಾರಿಗಳೊಂದಿಗೆ ಚರ್ಚಿಸಿ ಸರಿಪಡಿಸಲಾಗುವುದು ಎಂದು ತಿಳಿಸಿದರು.

    ನಂತರ ಮಾತನಾಡಿದ ಸಚಿವರು, ತುಮಕೂರು–ರಾಯದುರ್ಗ ಯೋಜನೆಗಾಗಿ 1361 ಎಕರೆ ಪ್ರದೇಶವನ್ನು ರೈಲ್ವೆ ಇಲಾಖೆಗೆ ಈಗಾಗಲೇ ಹಸ್ತಾಂತರಿಸಲಾಗಿದ್ದು, ಟೆಂಡರ್ ಪ್ರಕ್ರಿಯೆ ಪೂರ್ಣಗೊಳ್ಳುವ ಹಂತದಲ್ಲಿದೆ. ಬಾಕಿ ಇರುವ 35 ಎಕರೆ ಭೂಮಿಯನ್ನು 45 ದಿನಗಳೊಳಗಾಗಿ ಸ್ವಾಧೀನಪಡಿಸಿಕೊಂಡು ರೈಲ್ವೆ ಇಲಾಖೆಗೆ ಹಸ್ತಾಂತರಿಸಬೇಕು ಎಂದು ಸೂಚನೆ ನೀಡಿದರು.

    ತುಮಕೂರು–ದಾವಣಗೆರೆ ರೈಲ್ವೆ ಯೋಜನೆಯ ವಿಶೇಷ ಭೂಸ್ವಾಧೀನಾಧಿಕಾರಿ ರೇಣುಕಾ ಪ್ರಸಾದ್ ಜಂಬಗಿ ಸಭೆಗೆ ಮಾಹಿತಿ ನೀಡುತ್ತಾ, ಈಗಾಗಲೇ 770 ಎಕರೆ ಭೂಮಿಯನ್ನು ರೈಲ್ವೆ ಇಲಾಖೆಗೆ ಹಸ್ತಾಂತರಿಸಲಾಗಿದ್ದು, ಶಿರಾ ಮತ್ತು ತುಮಕೂರು ತಾಲ್ಲೂಕಿನಲ್ಲಿ ಮಾತ್ರ 61 ಎಕರೆ ಭೂಮಿಯನ್ನು ಸ್ವಾಧೀನಪಡಿಸಿಕೊಳ್ಳಬೇಕಾಗಿದೆ. ಭೂ ಮಾಲೀಕರಿಗೆ ಪರಿಹಾರ ನೀಡಲು 20 ಕೋಟಿ ಅನುದಾನದ ಅವಶ್ಯಕತೆಯಿದೆ ಎಂದು ತಿಳಿಸಿದರು.

    ಭದ್ರಾ ಮೇಲ್ದಂಡೆ ಯೋಜನೆ ಪ್ರಗತಿಯನ್ನು ಪರಿಶೀಲಿಸಿದ ಸಚಿವರು, ಬಾಕಿ ಇರುವ 576 ಎಕರೆ ಭೂ ಸ್ವಾಧೀನ ಪ್ರಕ್ರಿಯೆಯನ್ನು ಚುರುಕುಗೊಳಿಸಬೇಕು ಎಂದು ನಿರ್ದೇಶನ ನೀಡಿದಾಗ ಉತ್ತರಿಸಿದ ಯೋಜನೆಯ ಕಾರ್ಯನಿರ್ವಾಹಕ ಇಂಜಿನಿಯರ್ ಸಂದೇಶ್ ಮಾತನಾಡಿ, ಸ್ವಾಧೀನಪಡಿಸಿಕೊಂಡ 308 ಎಕರೆ ಭೂ ಮಾಲೀಕರಿಗೆ ಪರಿಹಾರ ನೀಡುವ ಕಾರ್ಯ ಪ್ರಗತಿ ಹಂತದಲ್ಲಿದೆ. ಭದ್ರಾ ಮೇಲ್ದಂಡೆ ಯೋಜನೆಗಾಗಿ ಶಿರಾ ತಾಲ್ಲೂಕಿನಲ್ಲಿ 28 ಎಕರೆ ಭೂಸ್ವಾಧೀನ ಪ್ರಕ್ರಿಯೆ ಪೂರ್ಣಗೊಂಡಿದ್ದು, ಚಿಕ್ಕನಾಯಕನಹಳ್ಳಿ ತಾಲ್ಲೂಕಿನಲ್ಲಿ ಸ್ವಾಧೀನಪಡಿಸಿಕೊಂಡ 280 ಎಕರೆ ಪ್ರದೇಶದ ಭೂ ಮಾಲೀಕರಿಗೆ ಪರಿಹಾರ ನೀಡಲಾಗುತ್ತಿದೆ ಎಂದು ತಿಳಿಸಿದರು.

    ಕರ್ನಾಟಕ ಕೈಗಾರಿಕಾ ಪ್ರದೇಶಾಭಿವೃದ್ಧಿ ಮಂಡಳಿ(ಕೆಐಎಡಿಬಿ)ಯ ಯೋಜನೆಗಳು, ಕೊಳಗೇರಿ ಪ್ರದೇಶದ ನಿವಾಸಿಗಳಿಗೆ ವಸತಿ ಸೌಲಭ್ಯ ಕಲ್ಪಿಸುವ ಬಗ್ಗೆ ಸಭೆಯಲ್ಲಿ ಚರ್ಚಿಸಲಾಯಿತು.

    ಸಭೆಯಲ್ಲಿ ಜಿಲ್ಲಾಧಿಕಾರಿ ಶುಭ ಕಲ್ಯಾಣ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ವಿ. ಅಶೋಕ್, ಅಪರ ಜಿಲ್ಲಾಧಿಕಾರಿ ಡಾ: ಎನ್. ತಿಪ್ಪೇಸ್ವಾಮಿ, ಉಪವಿಭಾಗಾಧಿಕಾರಿ ಗೌರವ್ ಕುಮಾರ್ ಶೆಟ್ಟಿ, ಎತ್ತಿನ ಹೊಳೆ, ಭದ್ರಾ ಮೇಲ್ದಂಡೆ ಯೋಜನೆ ಹಾಗೂ ರೈಲ್ವೆ ಯೋಜನೆಗೆ ಸಂಬಂಧಿಸಿದ ಅಧಿಕಾರಿಗಳು ಉಪಸ್ಥಿತರಿದ್ದರು.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Bc4BbJiZ9pF3L0M4QgZdQ4

    admin
    • Website

    Related Posts

    ಪಾವಗಡದಲ್ಲಿ ಮರುಕಳಿಸಿದ ನಕ್ಸಲ್ ಭೀತಿ: ದೇವಣ್ಣ ದಳಂ ಹೆಸರಿನಲ್ಲಿ ರೈತನಿಗೆ 5 ಲಕ್ಷ ರೂ. ಬೇಡಿಕೆ!

    September 12, 2026

    ತುಮಕೂರು ಸ್ಕ್ವೇರ್‌, ಕಾರಂಜಿಗೆ ಡಿಸಿಎಂ ಶಿಲಾನ್ಯಾಸ:  ಎಸ್‌ ಎಸ್‌ ವೃತ್ತದ 4 ದಿಕ್ಕಿನಲ್ಲೂ ಬೃಹತ್‌ ಎಲ್‌ ಇಡಿ ಅಳವಡಿಕೆಗೆ ಚಾಲನೆ

    September 12, 2026

     “ಸಮಾನತೆ ಕಲಿಸಿದ ಬಸವಣ್ಣ ನಾಡಿನ ಸಾಂಸ್ಕೃತಿಕ ನಾಯಕ” | ಬಸವಯುಗ ವೈಭವ ಗ್ರಂಥ ಬಿಡುಗಡೆ

    September 11, 2026

    Comments are closed.

    Our Picks

    ನೇಪಾಳ ಪ್ರವಾಹ: ತುಮಕೂರು ಮೂಲದ ಇಬ್ಬರು ನಾಪತ್ತೆ

    September 1, 2026

    ನೇಪಾಳದಲ್ಲಿ ಭೀಕರ ಪ್ರವಾಹದ ಅಬ್ಬರ: ಮತ್ತೊಂದು ಜಲಪ್ರಳಯದ ಭೀತಿ ಸೃಷ್ಟಿ

    August 28, 2026

    ಕಾವೇರಿ ನೀರು ವಿವಾದ: ಸುಪ್ರೀಂ ಕೋರ್ಟ್ ವಿಚಾರಣೆ ಬಳಿಕ ಮುಂದಿನ ನಡೆ ಕುರಿತು ನಿರ್ಧಾರ — ಸಚಿವ ರಾಮಲಿಂಗಾರೆಡ್ಡಿ

    August 13, 2026

    ಇತಿಹಾಸದಲ್ಲೇ ಪ್ರಥಮ: 80ನೇ ಸ್ವಾತಂತ್ರ್ಯ ದಿನಾಚರಣೆಯಂದು ಕೆಂಪುಕೋಟೆಯ ಮೇಲೆ ಮೊಳಗಲಿದೆ ‘ವಂದೇ ಮಾತರಂ’

    August 11, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಕೊರಟಗೆರೆ

    ಕೋಳಾಲ ಗ್ರಾಮದಲ್ಲಿ ಪ್ರಜಾಸೇವಾ ಅಭಿಯಾನ: ಜನಸಭೆಯಲ್ಲಿ 150 ಅರ್ಜಿ ಸ್ವೀಕಾರ

    September 13, 2026

    ಕೊರಟಗೆರೆ: ಗ್ರಾಮೀಣ ಭಾಗದ ಜನರ ಸಮಸ್ಯೆಗಳನ್ನ ಅರಿಯಲು ಜನರ ಬಳಿಗೆ ಸರ್ಕಾರ, ಜನರಿಗಾಗಿ ಸರ್ಕಾರ ಎಂಬುದು ಪ್ರಜಾ ಸೇವಾ ಅಭಿಯಾನ…

    ಬೆಂಗಳೂರಿನಲ್ಲಿ ರಾಷ್ಟ್ರೀಯ ಅಹಿಂದ ಸಂಘಟನೆಯ ಪದಗ್ರಹಣ ಮತ್ತು ಸನ್ಮಾನ ಕಾರ್ಯಕ್ರಮ ಯಶಸ್ವಿ

    September 13, 2026

    ಪತ್ನಿ ಜತೆಗಿನ ಕಲಹ: ಬಳ್ಳಾರಿಯಲ್ಲಿ ಪೊಲೀಸ್ ಠಾಣೆ ಎದುರು ವಿದ್ಯುತ್ ಟ್ರಾನ್ಸ್‌ ಫಾರ್ಮರ್ ಏರಿದ ವ್ಯಕ್ತಿ!

    September 13, 2026

    ಪೊಲೀಸ್ ಠಾಣೆಗೆ ನುಗ್ಗಿದ್ರೆ ಸೀದಾ ಪರಪ್ಪನ ಅಗ್ರಹಾರಕ್ಕೆ ಕಳಿಸ್ತೀವಿ; ಪ್ರತಾಪ್ ಸಿಂಹಗೆ ಪ್ರಿಯಾಂಕ್ ಖರ್ಗೆ ಖಡಕ್ ವಾರ್ನಿಂಗ್

    September 13, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.