ಗುಬ್ಬಿ: ರಾಜ್ಯದ ಮಹತ್ವಾಕಾಂಕ್ಷಿ ನೀರಾವರಿ ಯೋಜನೆಗಳಿಗೆ ಜಲಸಂಪನ್ಮೂಲ ಸಚಿವ ಎನ್. ಚಲುವರಾಯ ಸ್ವಾಮಿ ಅಭೂತಪೂರ್ವ ವೇಗ ನೀಡಿದ್ದಾರೆ. ಒಂದೆಡೆ ಮೇಕೆದಾಟು ಯೋಜನೆ ಅನುಷ್ಠಾನಕ್ಕೆ ಶತಾಯ ಗತಾಯ ಪ್ರಯತ್ನಿಸುತ್ತಿರುವ ಬೆನ್ನಲ್ಲೇ, ಇದೀಗ ನವೆಂಬರ್ ಅಂತ್ಯದೊಳಗೆ ಎತ್ತಿನಹೊಳೆ ಯೋಜನೆಯ ಮೂಲಕ ತುಮಕೂರಿಗೆ ನೀರು ಹರಿಸಲು ಸಚಿವರು ಪಣತೊಟ್ಟಿದ್ದಾರೆ. ಇದರ ಭಾಗವಾಗಿ ಗುಬ್ಬಿ ತಾಲೂಕಿನ ಕಂಚಿಗಾನಹಳ್ಳಿಯಲ್ಲಿ ನಡೆಯುತ್ತಿರುವ ಎತ್ತಿನಹೊಳೆ ಯೋಜನೆಯ ‘ಪ್ಯಾಕೇಜ್ 11’ರ ಕಾಮಗಾರಿ ಸ್ಥಳಕ್ಕೆ ಗುರುವಾರ ಮುದ್ದು ಭೇಟಿ ನೀಡಿ, ಸಮಗ್ರ ಪರಿಶೀಲನೆ ನಡೆಸಿದರು.
ಕಾಮಗಾರಿ ಸ್ಥಳದಲ್ಲಿ ಎದುರಾಗಿರುವ ಆಡಳಿತಾತ್ಮಕ ತೊಡಕುಗಳನ್ನು ನಿವಾರಿಸಲು ಸಚಿವರು ತುರ್ತು ಹೆಜ್ಜೆ ಇಟ್ಟಿದ್ದಾರೆ. ಕಂಚಿಗಾನಹಳ್ಳಿಯ ಅರಣ್ಯ ಇಲಾಖೆಗೆ ಸೇರಿದ 1.9 ಕಿ.ಮೀ ಜಾಗವನ್ನು ಪರಿಶೀಲಿಸಿದ ಅವರು, ಯೋಜನೆಗೆ ಅಗತ್ಯವಿರುವ ಅರಣ್ಯ ಇಲಾಖೆಯ 2ನೇ ಹಂತದ ಅನುಮತಿಗೆ ಸಂಬಂಧಿಸಿದ ಕಡತಗಳು ಈಗಾಗಲೇ ನವದೆಹಲಿಗೆ ತಲುಪಿವೆ ಎಂದು ಸ್ಪಷ್ಟಪಡಿಸಿದ ಅವರು, ದೆಹಲಿಯ ಅರಣ್ಯ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿಗಳು ಅರ್ಜಿ ಸಲ್ಲಿಸಿದ್ದು, ಸತತ ಪ್ರಯತ್ನದ ಫಲವಾಗಿ ಇನ್ನೊಂದು ವಾರದಲ್ಲಿ ಕೇಂದ್ರದಿಂದ ಅಂತಿಮ ಒಪ್ಪಿಗೆ (ಕ್ಲಿಯರೆನ್ಸ್) ದೊರೆಯುವ ವಿಶ್ವಾಸವನ್ನು ಸಚಿವರು ವ್ಯಕ್ತಪಡಿಸಿದರು.
ಗುರುತ್ವಾಕರ್ಷಣಾ ಕಾಲುವೆ ನಿರ್ಮಾಣದಲ್ಲಿ ಗುಣಮಟ್ಟಕ್ಕೆ ಅತ್ಯುನ್ನತ ಆದ್ಯತೆ ನೀಡಲು ಸೂಚಿಸಿ, ಕಾಮಗಾರಿ ಸ್ಥಳದಲ್ಲಿ 28 ಮೀಟರ್ ಆಳದ ಭೂಮಿಯನ್ನು ಅಗೆಯಬೇಕಾಗಿದ್ದು ಇಲ್ಲಿ ಮಣ್ಣು ಕುಸಿದಂತೆ ಅತ್ಯಂತ ಎಚ್ಚರಿಕೆಯಿಂದ ‘ಕಟ್ ಅಂಡ್ ಕವರ್’ ತಂತ್ರಜ್ಞಾನದ ಮೂಲಕ ಗುಣಮಟ್ಟದ ಕೆಲಸ ನಡೆಯಬೇಕು ಎಂದು ನಿರ್ದೇಶಿಸಿದರು. ಮಣ್ಣನ್ನು ತಾತ್ಕಾಲಿಕವಾಗಿ ಹೊರಹಾಕಲು ಹೆಚ್ಚುವರಿಯಾಗಿ ನೀಡಿರುವ 10 ಎಕರೆ ಜಾಗದಲ್ಲೇ ಹಾಕಿ, ತದನಂತರ ಅದೇ ಮಣ್ಣನ್ನು ಮರಳಿ ತುಂಬುವ ಪ್ರಕ್ರಿಯೆಯಟ್ಟು ಕಟ್ಟಿ ನಿರ್ವಹಿಸುವಂತೆ ಸೂಚಿಸಿ ಎರಡು ಕಡೆ ಕಾಲುವೆ ನಿರ್ಮಾಣ ಕಾರ್ಯ ಭರದಿಂದ ಸಾಗುತ್ತಿದ್ದು, ಅಕ್ಟೋಬರ್ 15ರ ಒಳಗಾಗಿ ತುಮಕೂರು ಭಾಗದ ಕಾಮಗಾರಿ ಸಂಪೂರ್ಣಗೊಳ್ಳಲಿದೆ ಹಾಗೂ ಶೇಕಡಾ 100ರಷ್ಟು ನೀರು ಪೂರೈಸುವುದು ನಿಶ್ಚಿತ ಎಂದು ಅವರು ಭರವಸೆ ನೀಡಿದರು.
ಎತ್ತಿನಹೊಳೆ ಯೋಜನೆಯು ಹಿಂದಿನ ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಆರಂಭಗೊಂಡ ಕನಸಿನ ಯೋಜನೆ. ಆರಂಭದಲ್ಲಿ 8 ಸಾವಿರ ಕೋಟಿ ರೂಪಾಯಿಗಳಷ್ಟಿದ್ದ ಯೋಜನಾ ವೆಚ್ಚವು ಪ್ರಸ್ತುತ 23 ಸಾವಿರ ಕೋಟಿ ರೂ.ಗಳಿಗೆ ಏರಿಕೆಯಾಗಿದೆ. ಆದಾಗ್ಯೂ, ರೈತರ ಹಿತದೃಷ್ಟಿಯಿಂದ ಯೋಜನೆಯನ್ನು ತ್ವರಿತವಾಗಿ ಪೂರ್ಣಗೊಳಿಸಲು ಸರ್ಕಾರ ಬದ್ಧವಾಗಿದೆ. ಇದರ ಜೊತೆಗೆ ಅನಿವಾರ್ಯ ಕಾರಣಗಳಿಂದ ವಿಳಂಬವಾಗಿದ್ದ ಬಿಕ್ರೆಗುಡ್ಡೆ [ಬಿಕ್ಕೆಗುಡ್ಡ] ಯೊಜನೆಯನ್ನೂ ಸಹ ಮುಂದಿನ ಎರಡು ತಿಂಗಳೊಳಗೆ ಪೂರ್ಣಗೊಳಿಸಿ ಲೋಕಾರ್ಪಣೆ ಮಾಡಲಾಗುವುದು.
— ಎನ್. ಚಲುವರಾಯ ಸ್ವಾಮಿ, ಜಲಸಂಪನ್ಮೂಲ ಸಚಿವ
ಪರಿಶೀಲನೆ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಸಚಿವರು, ರೈತರ ಆರ್ಥಿಕ ಶೋಷಣೆಯ ಬಗ್ಗೆ ತೀವ್ರ ಕಳವಳ ವ್ಯಕ್ತಪಡಿಸಿದ ಅವರು, ರೈತರು ಯಾವುದೇ ಕಾರಣಕ್ಕೂ ಮೈಕ್ರೋ ಫೈನಾನ್ಸ್ (ಕಿರು ಸಾಲ) ಮೊರೆ ಹೋಗಬಾರದು. ಮೈಕ್ರೋ ಫೈನಾನ್ಸ್ ಸಂಸ್ಥೆಗಳ ಕಿರುಕುಳದ ಬಗ್ಗೆ ಬೆರಳೆಣಿಕೆಯಷ್ಟು ಮಂದಿ ಮಾತ್ರ ದೂರು ನೀಡುತ್ತಿದ್ದು, ಲಿಖಿತ ದೂರುಗಳಿಲ್ಲದೆ ಅವರ ವಿರುದ್ಧ ಕಾನೂನು ಕ್ರಮ ಜರುಗಿಸುವುದು ಸರ್ಕಾರಕ್ಕೆ ಕಷ್ಟಕರವಾಗುತ್ತದೆ. ಹೀಗಾಗಿ ರೈತರು ಇಂತಹ ಸಾಲದ ಸುಳಿಗೆ ಸಿಲುಕದೆ ಎಚ್ಚರಿಕೆಯಿಂದ ಇರಬೇಕು ಎಂದು ಸಚಿವರು ಮನವಿ ಮಾಡಿದರು. ಈ ವೇಳೆ ಗುಬ್ಬಿ ಕೆಎಸ್ ಆರ್ಟಿಸಿ ನಿಮಗದ ಅಧ್ಯಕ್ಷ ಹಾಗೂ ಶಾಸಕ ಎಸ್.ಆರ್.ಶ್ರೀನಿವಾಸ್ ಹಾಗೂ ಇಲಾಖೆ ಅಧಿಕಾರಿಗಳು ಇದ್ದರು.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/CtZPUt7bwkaJkX2T6hAwZI
