ಬೆಂಗಳೂರು: ಜೂನ್ 21ರಂದು 8ನೇ ಅಂತರಾಷ್ಟ್ರೀಯ ಯೋಗ ದಿನಾಚರಣೆಯನ್ನು ಆಚರಿಸಲಾಗುತ್ತಿದೆ. ಯೋಗ ದಿನಾಚರಣೆಯನ್ನು ಶಾಲೆಗಳಲ್ಲೂ ಆಚರಿಸಲು ಸೂಚಿಸಿದ್ದು, ಹೀಗಾಗಿ ಮಂಗಳವಾರ ಅರ್ಧ ದಿನ ರಾಜ್ಯಾದ್ಯಂತ ಶಾಲೆಗಳಿಗೆ ರಜೆಯನ್ನು ಘೋಷಿಸುವಂತೆ ಶಿಕ್ಷಣ ಇಲಾಖೆ ಆದೇಶವನ್ನು ಹೊರಡಿಸಿದೆ.
ದಿನಾಂಕ 21.06.22ರಂದು ರಾಜ್ಯದ ಎಲ್ಲಾ ಶಾಲೆಗಳಲ್ಲೂ 8ನೇ ಅಂತರಾಷ್ಟ್ರೀಯ ಯೋಗ ದಿನಾಚರಣೆಯನ್ನು ಸ್ಥಳೀಯ ಚುನಾಯಿತ ಪ್ರತಿನಿಧಿಗಳು, ಅಧಿಕಾರಿಗಳು, ಎಸ್‌ಡಿಎಂಸಿ ಸದಸ್ಯರು, ಶಿಕ್ಷಕರುಗಳು, ಸ್ಥಳೀಯ ಯೋಗ ಸಂಸ್ಥೆಗಳ ಸಹಕಾರದೊಂದಿಗೆ ಯೋಗ ದಿನಾಚರಣೆ ನಡೆಸಲು ಸೂಚಿಸಲಾಗಿದೆ.
ಜೂನ್ 21ಕ್ಕೆ ಅರ್ಧದಿನ ಶಾಲೆಗಳಿಗೆ ರಜೆಯನ್ನು ಘೋಷಿಸಿರುವುದರಿಂದ ಆ ದಿನದ ಬದಲು ಜೂನ್ 25ರಂದು ಶನಿವಾರ ಪೂರ್ಣಪ್ರಮಾಣದ ಶಾಲೆಯನ್ನು ನಡೆಸಲು ಶಿಕ್ಷಣ ಇಲಾಖೆ ತನ್ನ ಅಧಿಸೂಚನೆಯಲ್ಲಿ ತಿಳಿಸಿದೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz