ಹೆಚ್.ಡಿ.ಕೋಟೆ: ಭೀಮನಹಳ್ಳಿ ಗ್ರಾಮ ಪಂಚಾಯಿತಿಯಲ್ಲಿ ಗುರುವಾರ ಉಪಾಧ್ಯಕ್ಷ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ಯೋಗಣ್ಣಚಾರ್ಯ ಅವಿರೋಧ ಆಯ್ಕೆಯಾಗಿದ್ದಾರೆ.
ತಾಲೂಕಿನ ಭೀಮನಹಳ್ಳಿ ಗ್ರಾಮಪಂಚಾಯಿತಿ ಉಪಾಧ್ಯಕ್ಷ ಚುನಾವಣೆಯಲ್ಲಿ ಯಾರೂ ನಾಮಪತ್ರ ಸಲ್ಲಿಸದೆ ಇರುವುದರಿಂದ ಯೋಗಣ್ಣಾಚಾರ್ಯ ಅವರನ್ನು ಅವಿರೋಧವಾಗಿ ಆಯ್ಕೆ ಮಾಡಲಾಗಿದೆ ಎಂದು ಚುನಾವಣೆ ಅಧಿಕಾರಿಯಾಗಿ ಕರ್ತವ್ಯ ನಿರ್ವಹಿಸಿದ ತಾರಕ ನೀರಾವರಿ ನಿಗಮ ಸಹಾಯಕ ಕಾರ್ಯಪಾಲಕ ಅಭಿಯಂತರರಾದ ಎಂ.ಸಿ.ರಾಮೇಗೌಡ ತಿಳಿಸಿದರು.
ಈ ಸಂದರ್ಭದಲ್ಲಿ ಚಂದ್ರುಶೆಟ್ಟಿಯವರು, ಜೆ.ಟಿ.ಅಯ್ಯಪ್ಪ, ಸಣ್ಣತಾಯಮ್ಮ, ಗೀತಾ, ಭವ್ಯ, ಗಾಯತ್ರಿ ಮತ್ತು ಪಿ ಡಿ ಓ ಸಿದ್ದಯ್ಯರವರು, ಗ್ರಾಮ ಪಂಚಾಯತಿ ಸಿಬ್ಬಂದಿ ವರ್ಗದವರು, ಗ್ರಾಮದ ಮುಖಂಡರು ಮತ್ತು ಗ್ರಾಮಸ್ಥರು ಹಾಜರಿದ್ದರು.
ವರದಿ: ಮಲಾರ ಮಹದೇವಸ್ವಾಮಿ
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Bc4BbJiZ9pF3L0M4QgZdQ4