nammatumakuru

    Subscribe to Updates

    Get the latest creative news from FooBar about art, design and business.

    What's Hot

    ಔರಾದ್: ಶಿವಾಜಿ ಮಹಾರಾಜರ ಮೂರ್ತಿ ನಿರ್ಮಾಣಕ್ಕೆ ಭೀಮಸೇನರಾವ್ ಸಿಂದೆ ₹2.50 ಲಕ್ಷ ಆರ್ಥಿಕ ನೆರವು

    March 10, 2026

    ತುಮಕೂರು: ರೈತರ ಭೂಸ್ವಾಧೀನ ಕೈ ಬಿಡುವಂತೆ ಒತ್ತಾಯಿಸಿ ಪ್ರತಿಭಟನೆ

    March 10, 2026

    ಮಧುಗಿರಿ: ಅಪ್ರಾಪ್ತೆಯ ಮದುವೆಗೆ ಬ್ರೇಕ್: ಪೊಲೀಸರು ಬರುವಷ್ಟರಲ್ಲಿ ವಧು-ವರ ಎಸ್ಕೇಪ್!

    March 10, 2026
    Facebook Twitter Instagram
    ಟ್ರೆಂಡಿಂಗ್
    • ಔರಾದ್: ಶಿವಾಜಿ ಮಹಾರಾಜರ ಮೂರ್ತಿ ನಿರ್ಮಾಣಕ್ಕೆ ಭೀಮಸೇನರಾವ್ ಸಿಂದೆ ₹2.50 ಲಕ್ಷ ಆರ್ಥಿಕ ನೆರವು
    • ತುಮಕೂರು: ರೈತರ ಭೂಸ್ವಾಧೀನ ಕೈ ಬಿಡುವಂತೆ ಒತ್ತಾಯಿಸಿ ಪ್ರತಿಭಟನೆ
    • ಮಧುಗಿರಿ: ಅಪ್ರಾಪ್ತೆಯ ಮದುವೆಗೆ ಬ್ರೇಕ್: ಪೊಲೀಸರು ಬರುವಷ್ಟರಲ್ಲಿ ವಧು-ವರ ಎಸ್ಕೇಪ್!
    • ಮಹಿಳೆಯರಿಂದಲೇ ಮಹಿಳೆಯರ ಮೇಲೆ ನಡೆಯುವ ಶೋಷಣೆಗಳು ಮೊದಲು ನಿಲ್ಲಲಿ: ತಹಶೀಲ್ದಾರ್ ಮಮತಾ ಎಂ.
    • ಕೊರಟಗೆರೆ: ಮೂಢನಂಬಿಕೆಯಿಂದಾಗಿ ಬಳಕೆಯಾಗದೆ ಪಾಳುಬಿದ್ದ ಬಾಲಿಕಾ ವಿದ್ಯಾರ್ಥಿನಿಲಯ
    • ಕಣ್ಣಿನ ಶಸ್ತ್ರಚಿಕಿತ್ಸೆಗೆ ಲಂಚ ಕೇಳಿದ್ದ ತುಮಕೂರು ಜಿಲ್ಲಾ ಆಸ್ಪತ್ರೆ ವೈದ್ಯೆ ಲೋಕಾಯುಕ್ತ ಬಲೆಗೆ
    • ನಡೆಯಲಿಲ್ಲ ಪವಾಡ!: ಮಲ್ಲಿಕಾರ್ಜುನ ಮುತ್ಯಾಗೆ ಬಿಗ್ ಶಾಕ್ | ಜಾಮೀನು ಅರ್ಜಿ ವಜಾ
    • ಬರಗೂರು ‘ಕೆಪಿಎಸ್ ಮ್ಯಾಗ್ನೆಟ್’ ಯೋಜನೆ ಕೈಬಿಡಿ:  AIDSO ಆಗ್ರಹ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಉ.ಪ್ರದೇಶದ ಸಿ.ಎಂ ಯೋಗಿಯನ್ನು ಭೇಟಿಯಾದ ಬಿಜೆಪಿ ಟಿಕೆಟ್ ಆಕಾಂಕ್ಷಿ ಕೆ.ಎಂ.ಮುನಿಯಪ್ಪ..
    ಕೊರಟಗೆರೆ March 21, 2023

    ಉ.ಪ್ರದೇಶದ ಸಿ.ಎಂ ಯೋಗಿಯನ್ನು ಭೇಟಿಯಾದ ಬಿಜೆಪಿ ಟಿಕೆಟ್ ಆಕಾಂಕ್ಷಿ ಕೆ.ಎಂ.ಮುನಿಯಪ್ಪ..

    By adminMarch 21, 2023No Comments3 Mins Read
    km muniyappa

    ಕೊರಟಗೆರೆ : 2023ರ ವಿಧಾನಸಭಾ ಚುನಾವಣೆಯ ಕಾವು ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ಟಿಕೆಟ್ ಆಕಾಂಕ್ಷಿಗಳ ಸಂಖ್ಯೆ ಕೂಡಾ ಏರುತ್ತಿದೆ. ಶಾಸಕ ಪಟ್ಟವನ್ನು ಪಡೆಯಲೇಬೇಕು ಎಂಬ ಮಹದಾಸೆಯಿಂದ ಪಕ್ಷದ ಹಿರಿಯ ನಾಯಕರ ಮೇಲೆ ಆಕಾಂಕ್ಷಿಗಳು ಮೇಲಿಂದ ಮೇಲೆ ಒತ್ತಡ ಹಾಕುತ್ತಿರುವುದು ಕಂಡು ಬರುತ್ತಿದೆ.

    ತುಮಕೂರು ಜಿಲ್ಲೆಯ ಕೊರಟಗೆರೆ ವಿಧಾನಸಭಾ ಕ್ಷೇತ್ರ ಜೆಡಿಎಸ್ ಹಾಗೂ ಕಾಂಗ್ರೆಸ್ ಭದ್ರ ಕೋಟೆಯಾಗಿದ್ದು, ಈ ಬಾರಿಯ ಚುನಾವಣೆಯಲ್ಲಿ ಬಿಜೆಪಿ ಪಕ್ಷಕ್ಕೂ ಕೂಡಾ ಪ್ರತಿಷ್ಠೆಯ ಕಣವಾಗಿದೆ.


    Provided by
    Provided by

    ಹೌದು, ಕೊರಟಗೆರೆ ಕ್ಷೇತ್ರದಲ್ಲಿ ಹಾಲಿ ಕಾಂಗ್ರೆಸ್ ಪಕ್ಷದ ಶಾಸಕರು ಇದ್ದು ಶತಾಯ-ಗತಾಯ ಬಿಜೆಪಿ ಅಭ್ಯರ್ಥಿಯನ್ನು ಗೆಲ್ಲಿಸಲೇ ಬೇಕು ಎಂದು ರಾಜ್ಯ ಹಾಗೂ ರಾಷ್ಟçಮಟ್ಟದ ಬಿಜೆಪಿ ನಾಯಕರು ಒಂದಿಲ್ಲೊಂದು ತಂತ್ರವನ್ನು ಹೆಣೆಯುತ್ತಿದ್ದಾರೆ. ಆದರೆ ಕೊರಟಗೆರೆ ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿ ಪಕ್ಷದಿಂದ ಟಿಕೆಟ್ ಆಕಾಂಕ್ಷಿಗಳ ಸಂಖ್ಯೆ ಹೆಚ್ಚಾಗಿದ್ದು ಹಿರಿಯ ನಾಯಕರಿಗೆ ತಲೆನೋವಾಗಿ ಪರಿಣಮಿಸಿದೆ.

    ಆದರೆ, ಕೊರಟಗೆರೆ ಕ್ಷೇತ್ರದಿಂದ ಕೆ.ಎಂ ಮುನಿಯಪ್ಪ ರವರಿಗೆ ಟಿಕೆಟ್ ಸಿಗುವ ಸಾಧ್ಯತೆ ಹೆಚ್ಚಾಗಿದ್ದು, ಮುನಿಯಪ್ಪ ಹಾಗೂ ತಂಡ ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ರವರ ಜೊತೆ ಮಾತುಕತೆ ನಡೆಸಿದ್ದು, ಬಹುತೇಕ ಕೆ.ಎಂ ಮುನಿಯಪ್ಪನವರಿಗೆ ಬಿಜೆಪಿ ಪಕ್ಷದ ಟಿಕೆಟ್ ಸಿಗುವ ಸಾಧ್ಯತೆ ಹೆಚ್ಚಿದೆ.

    ಕೆ.ಎಂ ಮುನಿಯಪ್ಪ ಅಪ್ಪಟ ಮಾಜಿ ಸಿಎಂ ಯಡಿಯೂರಪ್ಪನವರ ಅಭಿಮಾನಿಯಾಗಿದ್ದು, ಕೊರಟಗೆರೆ ಕ್ಷೇತ್ರದ ಮೂಲೆಯನ್ನು ಬಿಡದೆ ಜನರ ವಿಶ್ವಾಸ ಗೆದ್ದಿದ್ದಾರೆ. ಆದ್ದರಿಂದ ಕ್ಷೇತ್ರದ ಜನರು ಬಿಜೆಪಿ ಪಕ್ಷದಿಂದ ಮುನಿಯಪ್ಪನವರಿಗೆ ಟಿಕೆಟ್ ನೀಡಬೇಕು ಎಂಬ ಒತ್ತಾಯದ ಮಾತುಗಳು ಕೇಳಿ ಬರುತ್ತಿವೆ.

    ಕೆ.ಎಂ ಮುನಿಯಪ್ಪನವರು ತಮ್ಮ ಕ್ಷೇತ್ರದ ನಿರುದ್ಯೋಗಿ ಯುವಕ-ಯುವತಿಯರಿಗೆ ಉದ್ಯೋಗ ಕಲ್ಪಿಸುವ ನಿಟ್ಟಿನಲ್ಲಿ ಬೃಹತ್ ಉದ್ಯೋಗ ಮೇಳವನ್ನು ಏರ್ಪಡಿಸಿ ನೂರಾರು ಯುವ ಜನತೆಗೆ ಕೆಲಸ ಕೊಡಿಸುವುದರ ಮೂಲಕ ಬಡವರ ಬಾಳಿಗೆ ಬೆಳಕು ನೀಡಿದ್ದಾರೆ.

    ಕ್ಷೇತ್ರದ ಯುವ ಜನತೆಯ ಉತ್ತಮ ಭವಿಷ್ಯ ನಿರ್ಮಾಣದ ಕನಸ್ಸನ್ನು ಹೊತ್ತಿರುವ ಮುನಿಯಪ್ಪ ಹಾಗೂ ಬಿಜೆಪಿ ಯುವ ಮುಖಂಡ ಚೇತನ್ ಮುನಿಯಪ್ಪನವರು ಈಗಾಗಲೇ ಕ್ಷೇತ್ರದ ಬಡ ವರ್ಗದ ಜನರಿಗೆ ಹಲವು ರೀತಿಯಾಗಿ ಸಹಾಯ ಹಸ್ತ ಚಾಚಿ ಮಾನವೀಯತೆ ಮೆರೆದಿದ್ದಾರೆ.

    ಮುನಿಯಪ್ಪನವರು ಈಗಾಗಲೇ ಕೊರಟಗೆರೆ ಕ್ಷೇತ್ರದ ಪ್ರತಿಯೊಂದು ಗ್ರಾಮಕ್ಕೂ ತೆರಳಿ ಜನರ ಕಷ್ಟ ಸುಖದಲ್ಲಿ ಭಾಗವಹಿಸಿ ಜನರ ವಿಶ್ವಾಸ ಪಡೆಯುವಲ್ಲಿ ಯಶಸ್ವಿಯಾಗಿದ್ದು, ಮುಂದಿನ 2023ರ ವಿಧಾನಸಭಾ ಚುನಾವಣೆಗೆ ಬಿಜೆಪಿ ಪಕ್ಷದಿಂದ ಕಣಕ್ಕೆ ಇಳಿಯುವ ಸಾಧ್ಯತೆ ಹೆಚ್ಚಾಗಿದ್ದು, ಮುನಿಯಪ್ಪನವರೇ ಶಾಸಕರಾಗಬೇಕು ಎಂಬುದು ಕ್ಷೇತ್ರದ ಜನರ ಹಾಗೂ ಬಿಜೆಪಿ ಕಾರ್ಯಕರ್ತರು ಮತ್ತು ಮುನಿಯಪ್ಪನವರ ಅಭಿಮಾನಿಗಳ ಆಶಯ ಆಗಿದೆ.

    ಮುನಿಯಪ್ಪನವರಿಗೆ ಕೊರಟಗೆರೆ ಕ್ಷೇತ್ರದಿಂದ ಬಿಜೆಪಿ ಟಿಕೆಟ್ ನೀಡಿದ್ದೇ ಆದಲ್ಲಿ ನೂರಕ್ಕೆ ನೂರರಷ್ಟು ಗೆಲುವು ಸಾಧಿಸುವುದರಲ್ಲಿ ಯಾವುದೇ ಸಂಶಯವಿಲ್ಲ. ಈಗಾಗಲೇ ಕ್ಷೇತ್ರದ ಜನರ ಪ್ರೀತಿ ಹಾಗೂ ವಿಶ್ವಾಸ ಪಡೆದಿರುವ ಮುನಿಯಪ್ಪನವರು ಅನೇಕ ಸಾಮಾಜಿಕ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡಿದ್ದು, ರಾಜ್ಯ ಬಿಜೆಪಿ ನಾಯಕರ ವಿಶ್ವಾಸಕ್ಕೂ ಪಾತ್ರರಾಗಿದ್ದಾರೆ.

    ನಾನು ಕೊರಟಗೆರೆ ಕ್ಷೇತ್ರದಲ್ಲಿ ನಾಲ್ಕೂ ವರ್ಷಗಳಿಂದ ಪ್ರತಿ ಗ್ರಾಮಗಳಿಗೂ ಭೇಟಿ ನೀಡಿ ಪ್ರತಿ ಮನೆಯ ಸದಸ್ಯರ ಕಷ್ಟಗಳನ್ನ ಮನೆ ಮಗನಂತೆ ಆಲಿಸಿದ್ದೇನೆ. ಹಬ್ಬಹರಿದಿನಗಳು ಬಂದಾಗ ನನ್ನ ಮನೆಯ ಅಕ್ಕ ತಂಗಿಯರಿಗೆ ಉಡುಗೊರೆ ಕೊಡುವ ಹಾಗೆ ಗ್ರಾಮದ ಹೆಣ್ಣು ಮಕ್ಕಳಿಗೆ ಬಾಗಿನ ಕೊಟ್ಟಿದ್ದೇನೆ. ಕೊರೋನಾ ಸಂದರ್ಭದಲ್ಲಿ ಕ್ಷೇತ್ರದ ಕಟ್ಟಕಡೆಯ ಗ್ರಾಮದವರೆಗೆ ದಿನಸಿ ಪದಾರ್ಥಗಳನ್ನು ತಲುಪಿಸಿದ್ದೇನೆ. ಕ್ಷೇತ್ರದಲ್ಲಿ ಉಳಿದು ಜನರ ಸಮಸ್ಯೆಗಳನ್ನು ಆಲಿಸುತ್ತಾ ಎಲ್ಲರ ಸಮಸ್ಯೆಗಳಿಗೂ ಪರಿಹಾರ ಒದಗಿಸುತ್ತಾ ಇದೀಗ ಕ್ಷೇತ್ರದ ವಿದ್ಯಾವಂತ ನಿರುದ್ಯೋಗಿ ಯುವಕ ಯುವತಿಯರಿಗೆ ತಂದೆ ತಾಯಂದಿರು ಕಷ್ಟಪಟ್ಟು ಓದಿಸಿ ದೊಡ್ಡವರನ್ನಾಗಿ ಮಾಡಿದ್ದಾರೆ. ವಿದ್ಯಾರ್ಥಿಗಳು ಮನೆಯಲ್ಲಿ ಕೂತಿದ್ದಾರೆ. ಎಲ್ಲರಿಗೂ ಏನಾದರೂ ಮಾಡಿ ಕೆಲಸ ಕೊಡಿಸಬೇಕು ಎನ್ನುವ ಒಂದು ಆಶಯದಿಂದ ಈ ಉದ್ಯೋಗ ಮೇಳವನ್ನು ಆಯೋಜಿಸಿದ್ದೇನೆ. ಈ ಉದ್ಯೋಗ ಮೇಳದಲ್ಲಿ ನಮ್ಮ ಕ್ಷೇತ್ರದವರಲ್ಲದೆ ಜಿಲ್ಲೆಯ ನಾನಾ ಭಾಗದಿಂದ ಹತ್ತು ಸಾವಿರಕ್ಕೂ ಹೆಚ್ಚು ನಿರುದ್ಯೋಗಿ ಯುವಕ ಯುವತಿಯರು ಪಾಲ್ಗೊಂಡು ಸುಮಾರು ೬೦ ಕಂಪನಿಗಳಲ್ಲಿ ಕೆಲಸ ಸಿಕ್ಕಿದೆ. ಇದೀಗ ಆ ಬಡ ತಂದೆ ತಾಯಿಗಳಿಗೆ ಮಕ್ಕಳು ಆಸರೆಯಾಗಿದ್ದಾರೆ. ಇದರಿಂದ ನನಗೆ ಬಹಳ ಸಂತೋಷವಾಗಿದೆ. ಇದಿಷ್ಟೇ ಅಲ್ಲ ಮುಂದಿನ ದಿನಗಳಲ್ಲಿ ಆರೋಗ್ಯಕ್ಕೆ ಸಂಬಂಧಿಸಿದಂತೆ, ವಿದ್ಯಾಭ್ಯಾಸಕ್ಕೆ ಸಂಬಂಧಿಸಿದಂತೆ ನನ್ನಿಂದಾಗುವ ಎಲ್ಲ ಸೌಕರ್ಯಗಳನ್ನು ನನ್ನ ಕ್ಷೇತ್ರದ ಜನತೆಗೆ ಒದಗಿಸಿಕೊಡುವುದೇ ನನ್ನ ಮೂಲ ಉದ್ದೇಶ.

    –ಕೆ.ಎಂ.ಮುನಿಯಪ್ಪ, ಬಿಜೆಪಿ ಟಿಕೆಟ್ ಆಕಾಂಕ್ಷಿ

    ಉತ್ತರ ಪ್ರದೇಶದ ಜನಪ್ರಿಯ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ಅವರನ್ನು ಭೇಟಿ ಮಾಡಿದ ಸಂದರ್ಭದಲ್ಲಿ ವರಿಷ್ಠರ ಮಾಹಿತಿ ಮೇರೆಗೆ ಕೊರಟಗೆರೆ ಕ್ಷೇತ್ರದಲ್ಲಿ ಇದುವರೆಗೂ ಅಧಿಕೃತವಾಗಿ ಯಾವುದೇ ಅಭ್ಯರ್ಥಿಯ ಹೆಸರು ಘೋಷಣೆ ಆಗಿಲ್ಲ. ಪಕ್ಷದ ಸಂಘಟನೆಯಲ್ಲಿ ತೊಡಗಿಸಿಕೊಂಡು ಕ್ಷೇತ್ರದ ಜನರ ವಿಶ್ವಾಸವನ್ನು ಗಳಿಸುವವರಿಗೆ ಟಿಕೆಟ್ ನೀಡಲಾಗುವುದು ಎಂದು ವರಿಷ್ಠರ ಮಾಹಿತಿ ಮೇರೆಗೆ ತಿಳಿಸಿದರು. ಕ್ಷೇತ್ರದಲ್ಲಿ ಯಾವುದೇ ರೀತಿಯ ಗೊಂದಲ ಸೃಷ್ಟಿ ಮಾಡಿಕೊಳ್ಳದೇ ಟಿಕೆಟ್ ಆಕಾಂಕ್ಷಿ ಅಭ್ಯರ್ಥಿಗಳು ತಮ್ಮ ತಮ್ಮ ಕೆಲಸ ಮುಂದುವರೆಸಿ ಕ್ಷೇತ್ರದ ಅಭಿವೃದ್ಧಿ ಕಡೆಗೆ ಗಮನ ನೀಡಬೇಕು. ಮುಂದಿನ ದಿನಗಳಲ್ಲಿ ಅಧಿಕೃತವಾಗಿ ಅಭ್ಯರ್ಥಿಯ ಘೋಷಣೆ ಮಾಡಲಾಗುವುದು ಎಂದು ಉತ್ತರ ಪ್ರದೇಶದ ಸಿಎಂ ಯೋಗಿ ಆದಿತ್ಯನಾಥ ತಿಳಿಸಿದರು.

    ಕೇಂದ್ರ ಸಂಘಟನಾ ಕಾರ್ಯದರ್ಶಿ ಸಂತೋಷ್ ಜೀ ರವರನ್ನು ಭೇಟಿ ಮಾಡಿದ ಕೆ. ಎಂ ಮುನಿಯಪ್ಪ ರವರು ಕ್ಷೇತ್ರದ ರಾಜಕೀಯ ಚಟುವಟಿಕೆಗಳ ಬಗ್ಗೆ ಸುದೀರ್ಘ ಚರ್ಚೆ ನಡೆಸಿ ಮಾಹಿತಿ ಪಡೆದುಕೊಂಡಿದ್ದಾರೆ. ಕೊರಟಗೆರೆ ಕ್ಷೇತ್ರದಲ್ಲಿ ಇನ್ನೂ ಅಭ್ಯರ್ಥಿ ಹೆಸರು ಅಧಿಕೃತವಾಗಿಲ್ಲ. ಕ್ಷೇತ್ರದಲ್ಲಿ ಬಿಜೆಪಿ ಪಕ್ಷದಿಂದ ಯಾರಿಗೇ ಟಿಕೆಟ್ ನೀಡಿದರೂ ಬಿಜೆಪಿ ಗೆಲುವು ಸಾಧಿಸಲು ಪ್ರತಿಯೊಬ್ಬರು ಕೆಲಸ ಮಾಡಿ ಎಂದು ಸಲಹೆ ನೀಡಿದ್ದಾರೆಂದು ಕೆ.ಎಂ ಮುನಿಯಪ್ಪ ತಿಳಿಸಿದರು.

    ವರದಿ: ಮಂಜುಸ್ವಾಮಿ ಎಂ ಎನ್, ಕೊರಟಗೆರೆ.


    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/EKLI3M1veVt0cQ8xLKb9B1

    ಯೂಟ್ಯೂಬ್ ಚಾನೆಲ್ ಸಬ್ಸ್ ಕ್ರೈಬ್ ಆಗಿ: https://www.youtube.com/channel/UCtrQuDOToxHu8dzMaHjoYXA

    admin
    • Website

    Related Posts

    ಕೊರಟಗೆರೆ: ಮೂಢನಂಬಿಕೆಯಿಂದಾಗಿ ಬಳಕೆಯಾಗದೆ ಪಾಳುಬಿದ್ದ ಬಾಲಿಕಾ ವಿದ್ಯಾರ್ಥಿನಿಲಯ

    March 9, 2026

    ಆದಿಶಕ್ತಿ ದೇವತೆಗಳ ಪವಾಡ ರಾಜ್ಯದ ಗಮನ ಸೆಳೆದಿದೆ: ಶಶಾಂಕ್‌ ರಾಜ್

    March 8, 2026

    ಆತ್ಮ ವಿಶ್ವಾಸ ಹೆಚ್ಚಿಸಿಕೊಳ್ಳಲು ಶಾರದಾ ಪೂಜೆ ಅತ್ಯಂತ ಮಂಗಳಕರ: ಮುಖ್ಯ ಶಿಕ್ಷಕಿ ಮಂಜುಳ

    March 8, 2026

    Comments are closed.

    Our Picks

    ಇಸ್ರೇಲ್–ಇರಾನ್ ಸಂಘರ್ಷ: ದುಬೈನಲ್ಲಿರುವ ಕನ್ನಡಿಗರ ನೆರವಿಗೆ ಸಹಾಯವಾಣಿ ಆರಂಭ

    March 3, 2026

    ಇಂಡಿಯಾ ಎಐ ಇಂಪ್ಯಾಕ್ಟ್ ಎಕ್ಸ್‌ಪೋ 2026: ಆಲೋಚನೆ ಮತ್ತು ನಾವೀನ್ಯತೆಗಳ ಪ್ರಬಲ ಸಂಗಮ ಎಂದ ಪ್ರಧಾನಿ ಮೋದಿ

    February 17, 2026

    ಬಿಹಾರದಲ್ಲಿ ತುಮಕೂರು ಮೂಲದ ಒಂದೇ ಕುಟುಂಬದ ನಾಲ್ವರ ನಿಗೂಢ ಸಾವು: ಪ್ರವಾಸಕ್ಕೆ ಹೋದವರು ಹೆಣವಾಗಿ ಮರಳಿದರು!

    February 7, 2026

    ಬೆಂಗಳೂರು–ಹೈದರಾಬಾದ್ ಹೈಸ್ಪೀಡ್ ರೈಲು ಬೀದರ್ ವರೆಗೆ ವಿಸ್ತರಿಸಿ: ರೈಲ್ವೆ ಸಚಿವರಿಗೆ ದೇವೇಗೌಡರ ಮನವಿ

    February 6, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಜಿಲ್ಲಾ ಸುದ್ದಿ

    ಔರಾದ್: ಶಿವಾಜಿ ಮಹಾರಾಜರ ಮೂರ್ತಿ ನಿರ್ಮಾಣಕ್ಕೆ ಭೀಮಸೇನರಾವ್ ಸಿಂದೆ ₹2.50 ಲಕ್ಷ ಆರ್ಥಿಕ ನೆರವು

    March 10, 2026

    ಔರಾದ್: ತಾಲೂಕಿನ ಕಾಂಗ್ರೆಸ್ ಮುಖಂಡರಾದ ಭೀಮಸೇನರಾವ್ ಸಿಂದೆ ಅವರು ಸಾಮಾಜಿಕ ಬದ್ಧತೆ ಮೆರೆದಿದ್ದಾರೆ. ತಾಲೂಕಿನ ಚಿಕ್ಲಿ (ಜೆ) ಗ್ರಾಮದಲ್ಲಿ ಛತ್ರಪತಿ…

    ತುಮಕೂರು: ರೈತರ ಭೂಸ್ವಾಧೀನ ಕೈ ಬಿಡುವಂತೆ ಒತ್ತಾಯಿಸಿ ಪ್ರತಿಭಟನೆ

    March 10, 2026

    ಮಧುಗಿರಿ: ಅಪ್ರಾಪ್ತೆಯ ಮದುವೆಗೆ ಬ್ರೇಕ್: ಪೊಲೀಸರು ಬರುವಷ್ಟರಲ್ಲಿ ವಧು-ವರ ಎಸ್ಕೇಪ್!

    March 10, 2026

    ಮಹಿಳೆಯರಿಂದಲೇ ಮಹಿಳೆಯರ ಮೇಲೆ ನಡೆಯುವ ಶೋಷಣೆಗಳು ಮೊದಲು ನಿಲ್ಲಲಿ: ತಹಶೀಲ್ದಾರ್ ಮಮತಾ ಎಂ.

    March 9, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.