ಬೆಂಗಳೂರು: ಸಿನಿಮಾ ಗೆಲ್ಲಿಸಲು ಸ್ಟಾರ್ ನಟರೇ ಬೇಕಿಲ್ಲ ಎಂದು ಸ್ಯಾಂಡಲ್ ವುಡ್ ಕ್ವೀನ್ ರಮ್ಯಾ ಹೇಳಿದ್ದು, ನಟ ದರ್ಶನ್ ಕುರಿತಾದ ಹೇಳಿಕೆಗೆ ಅವರು ಹೀಗೆ ಉತ್ತರಿಸಿದರು.
ದರ್ಶನ್ ರೀತಿಯ ಸ್ಟಾರ್ ನಟರು ಜೈಲಿಗೆ ಹೋದಾಗ, ಸಿನಿಮಾ ರಂಗ ಪಾತಾಳಕ್ಕೆ ಬೀಳುತ್ತದೆ. ಸ್ಟಾರ್ ನಟರು ಸಿನಿಮಾ ಮಾಡದೇ ಇದ್ದರೆ ಸಿನಿಮಾ ರಂಗಕ್ಕೆ ನಷ್ಟಕ್ಕೆ ತಿರುಗುತ್ತಾ? ಎಂಬ ಪತ್ರಕರ್ತರ ಪ್ರಶ್ನೆಗೆ ಉತ್ತರಿಸಿದ ಅವರು, ಸು ಫ್ರಂ ಸೋನಲ್ಲಿ ಯಾವ ಸ್ಟಾರ್ ನಟರು ಇದ್ದಾರೆ? ಕಂಟೆಂಟ್ ಚೆನ್ನಾಗಿದ್ದರೆ ಸಿನಿಮಾ ಗೆಲ್ಲುತ್ತದೆ ಎಂದಿದ್ದಾರೆ.
ಸುಪ್ರೀಂ ತೀರ್ಪಿನಿಂದ ರೇಣುಕಾಸ್ವಾಮಿ ಹೆಂಡತಿ ಮಗುವಿಗೆ ನ್ಯಾಯ ಸಿಕ್ಕಿದೆ. ಈ ಬೆಳವಣಿಗೆಯಿಂದ ಹೆಣ್ಣುಮಕ್ಕಳಿಗೆ ಧೈರ್ಯ ಬಂದಿದೆ. ಎಲ್ಲ ಒಳ್ಳೆಯದಾಗಿದೆ ಅಂದುಕೊಳ್ತೀನಿ ಅಂತ ಹೇಳಿದ್ದಾರೆ.
ಇನ್ನೂ ದರ್ಶನ್ ಪತ್ನಿ ವಿಜಯಲಕ್ಷ್ಮಿ, ಸೋಶಿಯಲ್ ಮೀಡಿಯಾ ಹ್ಯಾಂಡಲ್ ಜವಾಬ್ದಾರಿ ಹೊತ್ತ ವಿಚಾರಕ್ಕೆ ಪ್ರತಿಕ್ರಿಯಿಸಿ, ಈ ನಡೆಯನ್ನು ಸ್ವಾಗತಿಸುತ್ತೀನಿ ಅಂದರು. ಇದು ಒಳ್ಳೆ ಬೆಳವಣಿಗೆ ಎಂದು ಅವರು ಹೇಳಿದ್ದಾರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC