ಮರ್ಯಾದೆಯಿಂದ ಕೆಲಸ ಮಾಡಲಿ ಅಂತಾ 135 ಸ್ಥಾನ ಗೆಲ್ಲಿಸಿದ್ದಾರೆ. ಮಚ್ಚು ಹಿಡಿದುಕೊಂಡು ಹೋಗುವ ವ್ಯಕ್ತಿಗೆ ಸಚಿವ ಸ್ಥಾನ ಕೊಟ್ಟಿದ್ದೀರಿ ಎಂದು ಡಿ.ಸುಧಾಕರ್ ವಿಚಾರವನ್ನು ಪ್ರಸ್ತಾಪಿಸಿ ಕಾಂಗ್ರೆಸ್ ಸರ್ಕಾರದ ವಿರುದ್ಧ ಮಾಜಿ ಸಿಎಂ ಕುಮಾರಸ್ವಾಮಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಯೋಜನೆ ಮತ್ತು ಸಾಂಖ್ಯಿಕ ಸಚಿವ ಡಿ.ಸುಧಾಕರ್ ವಂಚನೆ ಆರೋಪ ಸಂಬಂಧ ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದ ಅವರು, ಬೇರೆ ಪಕ್ಷದವರಿಗೆ ಮಾನ ಮರ್ಯಾದೆ ಇದೆಯಾ ಅಂತಾ ಕೇಳುತ್ತೀರಾ? ನಿಮಗೇನಾದ್ರೂ ಮಾನಮರ್ಯಾದೆ ಇದೆಯಾ ಸಿದ್ದರಾಮಯ್ಯನವರೇ? ಅಧಿಕಾರಿಗಳಿಗೆ ಎಷ್ಟು ಗಂಟೆಯಲ್ಲಿ ನೀವು ದೂರವಾಣಿ ಕರೆ ಮಾಡಿದ್ದೀರಿ? ಆ ಅಧಿಕಾರಿಯನ್ನು ಮೊದಲು ಅಮಾನತು ಅಂತಾ ಮಾತನಾಡಿದ್ದೀರಿ. ಇದೇನಾ ನೀವು ದಲಿತರ ಪರ ಅಂತಾ ಹೇಳುವುದು? ದಲಿತರ ರಕ್ಷಣೆ ಅಂತಾ ಹೇಳುತ್ತೀರಿ, ಇದೇ ನೀವು ಮಾಡುವ ಕೆಲಸ ಎಂದು ಕುಮಾರಸ್ವಾಮಿ ತರಾಟೆಗೆತ್ತಿಕೊಂಡಿದ್ದಾರೆ.
ವ್ಯವಹಾರ ಮಾಡುವಾಗ ಆ ಮಂತ್ರಿ ಯಾವ ಪಕ್ಷದಲ್ಲಿದ್ದರೋ ಗೊತ್ತಿಲ್ಲ. ಆ ಮಂತ್ರಿ ಬಿಜೆಪಿಯಲ್ಲಿದ್ದರೋ, ಕಾಂಗ್ರೆಸ್ನಲ್ಲಿ ಇದ್ದರೋ ಗೊತ್ತಿಲ್ಲ. ಇಬ್ಬರು ದಲಿತ ಮಹಿಳೆಯರ ಮೇಲೆ ಮಚ್ಚು ಹಿಡಿದು ಹೋಗಿದ್ದೀರಿ. ಮಚ್ಚು ಹಿಡಿದು ಹೋಗುವುದಕ್ಕಾ ಜನರು ವೋಟ್ ಹಾಕಿರೋದು? ಇದು ದಲಿತ ವಿರೋಧಿ, ಜನ ವಿರೋಧಿ ಸರ್ಕಾರ. ಇದೊಂದು ಧನದಾಹಿಗಳೇ ತುಂಬಿಕೊಂಡಿರುವ ಮಂತ್ರಿಮಂಡಲ ಎಂದು ಹೆಚ್ ಡಿಕೆ ವಾಗ್ದಾಳಿ ನಡೆಸಿದರು.


