ಬೆಂಗಳೂರು: ಬಹಳ ದೊಡ್ಡ ದೊಡ್ಡ ಆಶ್ವಾಸನೆ ಕೊಟ್ಟು ಸರ್ಕಾರ ಅಧಿಕಾರಕ್ಕೆ ಬಂತು. ಇವರು ಅಕ್ಕಿ ಕೊಡುತ್ತಿರುವುದು ನರೇಂದ್ರ ಮೋದಿ ಅವರು ಕೊಡುತ್ತಿರುವ ಅಕ್ಕಿ. ಕರ್ನಾಟಕದಲ್ಲಿ ಗೃಹಲಕ್ಷಿ ಯೋಜನೆ ಬರುವಂತಹ ದಿನಗಳಲ್ಲಿ ಕಾಂಗ್ರೆಸ್ ಗೆ ಮುಳುವಾಗುತ್ತದೆ ಎಂದು ಬಸವರಾಜ ಬೊಮ್ಮಾಯಿ ವಾಗ್ದಾಳಿ ಮಾಡಿದರು.
ಬೆಂಗಳೂರಿನ ಹೊರ ವಲಯದ ಅಧಿಕಾರಿ 8 ಕೋಟಿ ಕೊಟ್ಟಿದ್ದಾರೆ. ಅವರು ಬೇಡ ಅಂತ ಹೋದರೇ ಅದೇ ಜಾಗಕ್ಕೆ 13 ಕೋಟಿ ಪಡೆದು ನೇಮಕ ಮಾಡಿದ್ದಾರೆ. ಕುಮಾರ ಕೃಪಾದಲ್ಲಿ ದಂಧೆ ನಡೆಯುತ್ತಿದೆ. ಇವತ್ತು ಯಾವುದೇ ಅಧಿಕಾರಿ ಮುಕ್ತವಾಗಿ ಕೆಲಸ ಮಾಡಲು ಬಿಡುತ್ತಿಲ್ಲ.
ಸಣ್ಣಪುಟ್ಟ ವಿಚಾರಕ್ಕೆ ಬಿಜೆಪಿ ಕಾರ್ಯಕರ್ತರನ್ನು ಬಂಧಿಸುತ್ತಿದ್ದಾರೆ. ಪೊಲೀಸ್ ಅಧಿಕಾರಿಗಳಿಗೆ ಎಚ್ಚರಿಕೆ ಕೊಡುತ್ತೇನೆ. ನಿಮ್ಮ ನಿಷ್ಟೆ ಕಾನೂನಿಗೆ ಇರಬೇಕು. ಕಾವೇರಿ ನದಿ ನೀರಿನ ನಿರ್ವಹಣೆಯಲ್ಲಿ ಸರ್ಕಾರ ಸಂಪೂರ್ಣ ವಿಫಲವಾಗಿದೆ. ರೈತರಿಗೆ ನೀರು ಹರಿಸದೇ ತಮಿಳುನಾಡಿಗೆ ಹರಿಸಿದೆ. ಒಂದು ಕಾಳು ಅಕ್ಕಿಯನ್ನೂ ನೀವು ಕೊಟ್ಟಿಲ್ಲ, ನೀವು ನೀಚರು ಎಂದು ವಾಗ್ದಾಳಿಮಾಡಿದರು.


