ಬೆಳಗಾವಿ: ನವಜಾತ ಶಿಶುವನ್ನು ಕೊಂದು ತಿಪ್ಪೆಗೆಸೆದ ಆರೋಪದ ಮೇಲೆ ಯುವ ಜೋಡಿಯೊಂದನ್ನು ಬೆಳಗಾವಿ ಪೊಲೀಸರು ಬಂಧಿಸಿದ್ದಾರೆ.
ಕಿತ್ತೂರು ಬಳಿಯ ಅಂಬಡಗಟ್ಟಿ ಗ್ರಾಮದ ಮಹಾಬಲೇಶ್ ಕಾಮೋಜಿ (31) ಮತ್ತು ಸಿಮ್ರಾನ್ ಅಲಿಯಾಸ್ ಮುಸ್ಕಾನ್ (22) ಬಂಧಿತ ಆರೋಪಿಗಳಾಗಿದ್ದಾರೆ.
ಕಳೆದ ಮೂರು ವರ್ಷಗಳಿಂದ ಇವರಿಬ್ಬರು ಸಂಬಂಧದಲ್ಲಿದ್ದರು, ಇನ್ನು ಕೆಲವೇ ದಿನಗಳಲ್ಲಿ ವೈವಾಹಿಕ ಜೀವನಕ್ಕೆ ಕಾಲಿಡಬೇಕಿತ್ತು. ಆದರೆ, ವಿವಾಹಕ್ಕೂ ಮುನ್ನವೇ ಯುವತಿ ಗರ್ಭಣಿಯಾಗಿದ್ದು, ಮಾರ್ಚ್ 5 ರಂದು ಹೆರಿಗೆ ನೋವು ಕಾಣಿಸಿಕೊಂಡಿದೆ. ಈ ವೇಳೆ ತನ್ನ ವೇದನೆಯನ್ನು ಮಹಾಬಲೇಶ್ ಬಳಿ ಹೇಳಿಕೊಂಡಿದ್ದು, ಆತ ಹೇಳಿದಂತೆ ಮಗುವಿಗೆ ಜನ್ಮ ನೀಡಿದ್ದಾಳೆ.
ಬಳಿಕ ಮಗುವಿನ ಅಳುವಿನಿಂದ ಇತರರಿಗೆ ತಿಳಿಯುತ್ತದೆ ಎಂದು ಬಾಯಿ ಮೂಗು ಹಿಡಿದು ಡಬ್ಬದಲ್ಲಿ ಹಾಕಿದ್ದಾಳೆ. ಈ ವೇಳೆ ತಲೆಗೆ ಬಲವಾಗಿ ಪೆಟ್ಟು ಬಿದ್ದು ಮಗು ಸಾವನ್ನಪ್ಪಿದೆ. ಇದಾದ ಬಳಿಕ ಶಿಶುವನ್ನ ಪ್ಲಾಸ್ಟಿಕ್ ಚೀಲದಲ್ಲಿ ಹಾಕಿ ತಿಪ್ಪೆಗೆಸದು ಇದಕ್ಕೂ ತನಗೂ ಸಂಬಂಧ ಇಲ್ಲ ಎನ್ನುವಂತೆ ಸ್ಥಳದಿಂದ ಕಾಲ್ಕಿತ್ತಿದ್ದಾಳೆ.
ಈ ನಡುವೆ ಅಕ್ಕಪಕ್ಕದವರು ಶಿಶು ಬಿದ್ದಿದ್ದನ್ನ ಗಮನಿಸಿ ಕಿತ್ತೂರು ಠಾಣೆ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಪ್ರಕರಣದಲ್ಲಿ ತಾಯಿ ಪತ್ತೆ ಹಚ್ಚಿದ ಪೊಲೀಸರು, ಯುವಕ ಮಹಾಬಲೇಶನನ್ನು ಬಂಧನಕ್ಕೊಳಪಡಿಸಿದ್ದಾರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Bc4BbJiZ9pF3L0M4QgZdQ4