ದೇವನಹಳ್ಳಿ: ಯುವಕನೊಬ್ಬ ಸೆಲ್ಫಿ ವಿಡಿಯೋ ಮಾಡಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನ ರಾಜಘಟ್ಟ ಗ್ರಾಮದ ಕೆರೆ ಬಳಿ ನಡೆದಿದೆ.
ಜೂ.13ರಂದು ಸೆಲ್ಫಿ ವಿಡಿಯೋ ಮಾಡಿದ ಮಂಜುನಾಥ್, ಮಾತ್ರೆ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಇದೀಗ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.
ಪ್ರೀತಿಸಿದ ಯುವತಿ ಗಗನ ವಿರುದ್ಧ ಕಿರುಕುಳ ಆರೋಪ ಮಾಡಿರುವ ಮಂಜುನಾಥ್, ಆಕೆಗೆ ಬೇರೊಬ್ಬನ ಜೊತೆ ಸಂಬಂಧವಿತ್ತು ಎಂದು ವಿಡಿಯೋದಲ್ಲಿ ಹೇಳಿದ್ದಾರೆ. ಅಷ್ಟೇ ಅಲ್ಲದೆ ಯುವತಿಯ ಕುಟುಂಬಸ್ಥರ ವಿರುದ್ಧ ಕೂಡ ಮಂಜುನಾಥ್ ಕಿರುಕುಳ ಆರೋಪ ಮಾಡಿದ್ದು, ನನಗೆ ನ್ಯಾಯ ಕೂಡಿಸುವಂತೆ ಹೇಳಿದ್ದಾರೆ.
ಮಾತ್ರೆ ಸೇವಿಸಿದ್ದ ಮಂಜುನಾಥ್ನನ್ನು ಸ್ಥಳೀಯರು ಆಸ್ಪತ್ರೆಗೆ ದಾಖಲಿಸಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.
ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸರಿಂದ ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ. ಘಟನೆ ಬೆನ್ನಲ್ಲೇ ಯುವತಿ ಮತ್ತು ಕುಟುಂಬಸ್ಥರು ನಾಪತ್ತೆಯಾಗಿದ್ದಾರೆ ಎಂದು ತಿಳಿದು ಬಂದಿದೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/KN8LiGgEw492Ijygqm0dVW