ಕೂಡ್ಲಿಗಿ (ವಿಜಯನಗರ ಜಿಲ್ಲೆ): ಕೋಡಿ ಬಿದ್ದ ಕೆರೆಯ ಬಳಿ ಸೆಲ್ಫಿ ತೆಗೆಯುತ್ತಿದ್ದ ವೇಳೆ ಯುವಕನೊಬ್ಬ ಕೆರೆಗೆ ಬಿದ್ದು ಮೃತಪಟ್ಟಿರುವ ಘಟನೆ ತಾಲ್ಲೂಕಿನ ಗಂಡಬೊಮ್ಮನಹಳ್ಳಿ ಕೆರೆ ಶುಕ್ರವಾರ ನಡೆದಿದೆ.
ತಾಲ್ಲೂಕಿನ ಕೆ.ದಿಬ್ಬದಹಳ್ಳಿ ಗ್ರಾಮದ ಗ್ರಾಮ ಪಂಚಾಯಿತಿ ಸದಸ್ಯ ಪಾಲಯ್ಯ ಅವರ ಮಗ ಚೇತನ್ ಕುಮಾರ್ (21) ಮೃತ ಯುವಕ ಎಂದು ತಿಳಿದು ಬಂದಿದೆ.
ತನ್ನ ಕುಟುಂಬಸ್ಥರ ಜೊತೆಗೆ ಕೋಡಿಬಿದ್ದ ಕೆರೆಯನ್ನು ನೋಡಲು ಚೇತನ್ ತೆರಳಿದ್ದ. ಇಬ್ಬರು ಸ್ನೇಹಿತರು ತುಂಬಿದ ಕೆರೆಯ ಕೋಡಿ ಬಳಿ ಫೋಟೋ ತೆಗೆದುಕೊಳ್ಳಲು ಮುಂದಾಗಿದ್ದಾರೆ.
ಈ ವೇಳೆ ಕಾಲು ಜಾರಿ ಚೇತನ್ ಕೆರೆಗೆ ಬಿದ್ದಿದ್ದು, ಆತನನ್ನು ರಕ್ಷಿಸಲು ಜೊತೆಗಿದ್ದವರು ಸಾಕಷ್ಟು ಪ್ರಯತ್ನಿಸಿದರೂ ಯಾವುದೇ ಪ್ರಯೋಜನವಾಗಲಿಲ್ಲ ಎಂದು ತಿಳಿದು ಬಂದಿದೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296