ತೆಲಂಗಾಣ: ತೆಲಂಗಾಣದ ಕೊಮರಂ ಭೀಮ್ ಆಸಿಫಾಬಾದ್ ಜಿಲ್ಲೆಯಲ್ಲಿ ವ್ಯಕ್ತಿಯೊಬ್ಬ ಒಂದೇ ಬಾರಿಗೆ ಇಬ್ಬರು ಯುವತಿಯರನ್ನು ಮದುವೆಯಾಗಿರುವ ಘಟನೆ ನಡೆದಿದೆ.
ಲಿಂಗಾಪುರ ಮಂಡಲದ ಗುಮ್ನೂರ್ ಗ್ರಾಮದ ನಿವಾಸಿ ಸೂರ್ಯದೇವ್, ಲಾಲ್ ದೇವಿ ಮತ್ತು ಝಲ್ಕರಿ ದೇವಿಯನ್ನು ಪ್ರೀತಿಸುತ್ತಿದ್ದು, ಒಂದೇ ಸಮಾರಂಭದಲ್ಲಿ ಇವರಿಬ್ಬರನ್ನೂ ಮದುವೆಯಾಗಲು ನಿರ್ಧರಿಸಿದ್ದಾನೆ.
ಇನ್ನು ಈ ವರ ಒಂದೇ ಮದುವೆಯ ಆಮಂತ್ರಣ ಪತ್ರಿಕೆಯಲ್ಲಿ ಎರಡೂ ವಧುಗಳ ಹೆಸರನ್ನು ಮುದ್ರಿಸಿ ಅದ್ಧೂರಿಯಾಗಿ ಮದುವೆಯಾಗಿದ್ದಾನೆ. ಮೂವರು ಕುಟುಂಬಗಳು, ಸಂಬಂಧಿಕರು ಮತ್ತು ಗ್ರಾಮಸ್ಥರ ಸಮ್ಮುಖದಲ್ಲಿ ಈ ಮದುವೆ ನಡೆದಿದೆ.
ಗ್ರಾಮದ ಹಿರಿಯರು ಆರಂಭದಲ್ಲಿ ಈ ಮದುವೆಯನ್ನು ವಿರೋಧಿಸಿದರು. ಆದರೆ ಕೊನೆಗೆ ಅವರ ಆಸೆಗೆ ಒಪ್ಪಿಗೆ ನೀಡಿದ್ದರಂತೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/KN8LiGgEw492Ijygqm0dVW
————————————