ಹಾಸನ: ಜಿಲ್ಲೆಯ ಯಸಳೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ವ್ಯಕ್ತಿಯೊಬ್ಬ ಗುಂಡು ಹಾರಿಸಿಕೊಂಡು ಸಾವಿಗೆ ಶರಣಾಗಿರುವ ಘಟನೆ ನಡೆದಿದೆ.
ಕರುಣಾಕರ (40) ಸಾವಿಗೆ ಶರಣಾದ ವ್ಯಕ್ತಿಯಾಗಿದ್ದಾರೆ. ಕೌಟುಂಬಿಕ ಕಲಹದ ಹಿನ್ನೆಲೆ ಗುಂಡು ಹಾರಿಸಿಕೊಂಡು ಸಾವಿಗೆ ಶರಣಾಗಿರುವ ಶಂಕೆ ವ್ಯಕ್ತವಾಗಿದೆ.
ಸಕಲೇಶಪುರ ತಾಲ್ಲೂಕಿನ ಬಾಚೀಹಳ್ಳಿ ಗ್ರಾಮದವರಾದ ಕರುಣಾಕರ ಕಾಫಿ ಬೆಳೆಗಾರರಾಗಿದ್ದರು. ಕೌಟುಂಬಿಕ ಕಲಹದಿಂದ ನೊಂದಿದ್ದ ಈತ ಮನೆಯಲ್ಲಿ ಬಂದೂಕಿನಿಂದ ಹಾರಿಸಿಕೊಂಡು ಆತಹತ್ಯೆ ಮಾಡಿಕೊಂಡಿದ್ದಾರೆ.
ವಿಷಯ ತಿಳಿದು ಸ್ಥಳಕ್ಕೆ ಆಗಮಿಸಿದ ಪೊಲೀಸರು ಪೊಲೀಸರು ಸ್ಥಳ ಪರಿಶೀಲನೆ ನಡೆಸಿ ಮುಂದಿನ ಕ್ರಮ ಕೈಗೊಂಡಿದ್ದಾರೆ. ಯಸಳೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296