ರಾಯಚೂರು: ವಿದ್ಯಾರ್ಥಿನಿಯರು, ಮಹಿಳೆಯರನ್ನು ಹಿಂಬಾಲಿಸಿ ಪ್ಯಾಂಟ್ ಜೀಪ್ ಬಿಚ್ಚಿ ವಿಕೃತವಾಗಿ ವರ್ತಿಸುತ್ತಿದ್ದ ಪುಂಡನಿಗೆ ಗ್ರಾಮಸ್ಥರು ಹಿಡಿದು ಥಳಿಸಿರುವ ಘಟನೆ ಪಟ್ಟಣದ ಸಾಯಿಬಾಬಾ ದೇವಾಲಯದ ರಸ್ತೆಯಲ್ಲಿ ನಡೆದಿದೆ.
ಕಾಲೇಜಿಗೆ ಹೋಗಿ ಬರುವ ವಿದ್ಯಾರ್ಥಿನಿಯರು ಹಾಗೂ ಮಹಿಳೆಯರನ್ನ ಹಿಂಬಾಲಿಸುತ್ತಿದ್ದ ಕಾಮುಕ, ಅವರ ಗಮನ ಸೆಳೆದು ಪ್ಯಾಂಟ್ ಜಿಪ್ ತೆಗೆದು ವಿಕೃತವಾಗಿ ವರ್ತಿಸುತ್ತಿದ್ದ, ಈ ದೃಶ್ಯವನ್ನು ಸೆರೆ ಹಿಡಿದ ಸ್ಥಳೀಯರು ಹಿಗ್ಗಾ ಮುಗ್ಗಾ ಥಳಿಸಿ ಪೊಲೀಸರಿಗೆ ಒಪ್ಪಿಸಿದ್ದಾರೆ.
ಈ ಸಂಬಂಧ ರಾಯಚೂರು ಪಶ್ಚಿಮ ಠಾಣೆಯ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮಕೈಗೊಂಡಿದ್ದಾರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/HirBanj7uz4I4A2vAG5yXx