ಬೀದರ್: ವಾಕಿಂಗ್ ಹೋಗುತ್ತಿದ್ದ ಯುವಕನಿಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಮೃತಪಟ್ಟ ಘಟನೆ ಬೀದರ್ ಜಿಲ್ಲಾ ಔರಾದ ತಾಲೂಕಿನ ಸಂತಪೂರ –ಮಸ್ಕಲ್ ರಸ್ತೆಯಲ್ಲಿ ಭಾನುವಾರ ಸಂಜೆ ನಡೆದಿದೆ.
ಮಸ್ಕಲ್ ಗ್ರಾಮದ ನವನಾಥ ರಾಮಣ್ಣ (32) ಮೃತಪಟ್ಟವರಾಗಿದ್ದಾರೆ. ಘಟನೆಯಲ್ಲಿ ಗಾಯಗೊಂಡ ಸಂತಪೂರ ಗ್ರಾಮದ ರಾಹುಲ್ ಎಂಬ ಯುವಕನನ್ನು ಬೀದರ್ ನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಭಾನುವಾರ ಸಂಜೆ ಸ್ನೇಹಿತನೊಂದಿಗೆ ವಾಕಿಂಗ್ ಹೋಗುತ್ತಿದ್ದ ರಾಹುಲ್ ಗೆ ಎದುರಿನಿಂದ ವೇಗವಾಗಿ ಬಂದ ಬೈಕ್ ಡಿಕ್ಕಿ ಹೊಡೆದ ಪರಿಣಾಮ ದುರ್ಘಟನೆ ಸಂಭವಿಸಿದೆ. ಸಂತಪೂರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ಜರುಗಿದೆ.
ವರದಿ: ಅರವಿಂದ ಮಲ್ಲಿಗೆ, ಬೀದರ್
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Bc4BbJiZ9pF3L0M4QgZdQ4