ಸರಗೂರು: ಇಂದಿನ ಯುವಜನತೆ ಪುಸ್ತಕಕ್ಕೆ ಸೀಮಿತವಾಗಿದ್ದು, ಸಮಾಜದಲ್ಲಿನ ವಿಚಾರಗಳನ್ನು ಅರಿಯದೇ ಜೀವನ ನಿರ್ವಹಣೆ ಕಷ್ಟಸಾಧ್ಯವಾಗಿ ವಿಚಲಿತರಾಗುತ್ತಿದ್ದಾರೆ. ಆದ್ದರಿಂದ ಯುವ ಜನತೆ ಕಾನೂನು ಸುರಕ್ಷತೆ ಪಾಲನೆ, ಸಾಮಾಜಿಕ ಜವಾಬ್ದಾರಿಗಳನ್ನು ರೂಢಿಸಿಕೊಳ್ಳಬೇಕು ಎಂದು ಸರಗೂರು ಆರಕ್ಷಕ ಠಾಣೆ ವೃತ್ತ ನಿರೀಕ್ಷಕ ಪ್ರಸನ್ನ ಕುಮಾರ್ ಸಲಹೆ ನೀಡಿದರು.
ಪಟ್ಟಣದ ಜೆಎಸ್ ಎಸ್ ಶಿವಾನುಭವ ಮಂಗಳ ಮಂಟಪದಲ್ಲಿ ಶುಕ್ರವಾರ ದಂದು ಜೆಎಸ್ ಎಸ್ ಬಾಲಕಿಯರ ಪದವಿ ಪೂರ್ವ ಕಾಲೇಜು ವತಿಯಿಂದ ಪ್ರಥಮ ಪಿಯುಸಿ ವಿದ್ಯಾರ್ಥಿನಿಯರಿಗೆ ದ್ವಿತೀಯ ಪಿಯುಸಿ ವಿದ್ಯಾರ್ಥಿನಿಯರು ಸ್ವಾಗತ ಸಮಾರಂಭ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದು, ಗಣ್ಯರು ಕಾರ್ಯಕ್ರಮದ ಜ್ಯೋತಿ ಬೆಳಗಿಸುವ ಮೂಲಕ ಹಾಗೂ ಶ್ರೀಗಳ ಫೋಟೋಗೆ ಪುಷ್ಪಾರ್ಚನೆ ಸಲ್ಲಿಸಿ ನಂತರ ಮಾತನಾಡಿದರು.
ವಿದ್ಯಾರ್ಥಿನಿಯರು ತಮಗೆ ಎದುರಾಗುವ ತೊಂದರೆಗಳಿಂದ ಹೇಗೆ ರಕ್ಷಣೆಯನ್ನು ಪಡೆದುಕೊಳ್ಳಬೇಕು. ವಿದ್ಯಾರ್ಥಿನಿಯರು ಸಾಮಾಜಿಕ ಮಾಧ್ಯಮಗಳನ್ನು ಬಳಸಿದಾಗ ಉಂಟಾಗುವ ತೊಂದರೆಗಳ ಬಗ್ಗೆ ತಿಳಿಸಿದ ಅವರು, ವಿದ್ಯಾರ್ಥಿನಿಯರ ಸುರಕ್ಷತೆಗೆ ಪೊಲೀಸ್ ಇಲಾಖೆ ಯಾವಾಗಲೂ ಸಿದ್ಧವಿದೆ ಎಂದು ತಿಳಿಸಿದರು.
ಸರಗೂರು ಸಮುದಾಯದ ಆರೋಗ್ಯ ಕೇಂದ್ರ ಸ್ತ್ರೀರೋಗ ತಜ್ಞರು ಭಾಗ್ಯಲಕ್ಷ್ಮಿ ಬಿ. ಮಾತನಾಡಿ, ನಾನು ಸಹ ಜೆಎಸ್ ಎಸ್ ವೈದ್ಯಕೀಯ ಕಾಲೇಜಿನ ವಿದ್ಯಾರ್ಥಿನಿ, ಗ್ರಾಮೀಣ ಭಾಗದಲ್ಲಿ ಹೆಣ್ಣು ಮಕ್ಕಳ ವಿದ್ಯಾಭ್ಯಾಸಕ್ಕಾಗಿ ಶ್ರೀಗಳವರ ಆಶೀರ್ವಾದದಿಂದ ಈ ಪದವಿ ಪೂರ್ವ ಕಾಲೇಜು ನಡೆಯುತ್ತಿದ್ದು, ಈ ಕಾಲೇಜಿನಲ್ಲಿ ಉತ್ತಮ ಕಲಿಕಾ ವಾತಾವರಣವಿದ್ದು, ಉತ್ತಮ ಶಿಕ್ಷಣವನ್ನು ಪಡೆದುಕೊಂಡು ವಿದ್ಯಾರ್ಥಿನಿಯರು ಸ್ವಾವಲಂಬಿಗಳಾಗಿ ಬದುಕಬೇಕು ಎಂದರು.
ಜೆಎಸ್ಎಸ್ ಕಾಲೇಜಿನ ಪ್ರಾಂಶುಪಾಲ ಮಹದೇವಸ್ವಾಮಿ ಕೆ.ಎಸ್. ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿ ಮಾತನಾಡಿ, ಜ್ಞಾನದ ಜತೆ ನೈತಿಕ ಶಿಕ್ಷ ಣ ಪಡೆದಾಗ ನಿಮಗೆ ಸಿಗುವ ಗೌರವ ಇಮ್ಮಡಿಯಾಗಲಿದೆ. ಮನಸ್ಸಿನ ಆಕರ್ಷಣೆಗಳು ತಾತ್ಕಾಲಿಕವಾಗಿದ್ದು, ಅವುಗಳ ಹಿಂದೆ ಹೋದವರು ಜೀವನದಲ್ಲಿ ನೊಂದಿರುವ ನಿದರ್ಶನಗಳು ಹೆಚ್ಚಾಗಿವೆ. ಕಾಲೇಜು ಸಂದರ್ಭದಲ್ಲಿ ಉತ್ತಮ ಸ್ನೇಹ ಗಳಿಸಿಕೊಂಡು ಶೈಕ್ಷಣಿಕ ಪ್ರಗತಿ ಸಾಧಿಸಿದರೆ ಉತ್ತಮ ಜೀವನ ರೂಪಿಸಿಕೊಳ್ಳಬಹುದು ಎಂದರು.
ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳು ಸಾಂಸ್ಕೃತಿಕ ಕಾರ್ಯಕ್ರಮ ನಡೆಸಿಕೊಟ್ಟರು. ಈ ಸಂದರ್ಭದಲ್ಲಿ ಕಾಲೇಜಿನ ಉಪನ್ಯಾಸಕರು ಹಾಗೂ ವಿದ್ಯಾರ್ಥಿಗಳು ಇದ್ದರು.
ವರದಿ: ಹಾದನೂರು ಚಂದ್ರ
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC