ಬೆಂಗಳೂರು: ಯುವತಿ ಮೇಲೆ ಬಿಎಂಟಿಸಿ ಬಸ್ ಹರಿದ ಪರಿಣಾಮ ಯುವತಿ ಸಾವನ್ನಪ್ಪಿರುವ ಘಟನೆ ಬನಶಂಕರಿ ಸಂಚಾರಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಇಂದು ಬೆಳಗ್ಗೆ ನಡೆದಿದೆ.
ಆಂಧ್ರಪ್ರದೇಶದ ಅನಂತಪುರ ನಿವಾಸಿ ಮೋನಿಕಾ(20) ಮೃತಪಟ್ಟ ಯುವತಿ ಎಂದು ಗುರುತಿಸಲಾಗಿದೆ. ಬಿಎಂಟಿಸಿ ಬಸ್ ಹತ್ತಲು ಮುಂದಾಗುತ್ತಿದ್ದಂತೆ ಯುವತಿ ನಿಯಂತ್ರಣ ತಪ್ಪಿ ಕೆಳಗೆ ಬಿದ್ದಿದ್ದು, ಆಕೆಯ ಮೇಲೆ ಬಸ್ ಹರಿದಿದೆ.
ಯುವತಿ ನಗರದ ಕತ್ರಿಗುಪ್ಪೆಯಲ್ಲಿ ಮೋನಿಕಾ ವಾಸವಾಗಿದ್ದು ಕೊಂಡು ಬೊಮ್ಮನಹಳ್ಳಿಯ ಖಾಸಗಿ ಕಂಪನಿಯೊಂದರಲ್ಲಿ ಕೆಲಸ ಮಾಡುತ್ತಿದ್ದರು. ಇಂದು ಬೆಳಗ್ಗೆ 8ಗಂಟೆ ಸುಮಾರಿನಲ್ಲಿ ದೇವೇಗೌಡ ಪೆಟ್ರೋಲ್ ಬಂಕ್,ಚಿನ್ನಮ ಜಂಕ್ಷನ್ ಸಮೀಪ ಮೋನಿಕಾ ಅವರು ಬಿಎಂಟಿಸಿ ಬಸ್ ಹತ್ತಲು ಹೋದಾಗ ನಿಯಂತ್ರಣ ತಪ್ಪಿ ಕೆಳಗೆ ಬಿದ್ದಿದ್ದಾರೆ. ಆವೇಳೆ ಮೋನಿಕಾ ಮೇಲೆ ಬಸ್ ಹರಿದ ಪರಿಣಾಮ ಸ್ಥಳದಲ್ಲಿ ಮೃತಪಟ್ಟಿದ್ದಾಳೆ.
ಘಟನಾ ಸ್ಥಳಕ್ಕೆ ಬನಶಂಕರಿ ಸಂಚಾರಿ ಠಾಣೆ ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಶೀಲಿಸಿದ್ದು, ಪ್ರಕರಣ ದಾಖಲಿಸಿಕೊಂಡು ಕಾನೂನು ಕ್ರಮ ಕೈಗೊಂಡಿದ್ದಾರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Bc4BbJiZ9pF3L0M4QgZdQ4