ಭೋಪಾಲ್: ಸಹೋದರಿಯ ವಿವಾಹ ಸಮಾರಂಭದಲ್ಲಿ ವೇದಿಕೆಯ ಮೇಲೆ ನೃತ್ಯ ಮಾಡುತ್ತಿದ್ದ ಯುವತಿ ಹೃದಯಾಘಾತದಿಂದ ಕುಸಿದು ಬಿದ್ದು ಮೃತಪಟ್ಟಿರುವ ಘಟನೆ ಮಧ್ಯಪ್ರದೇಶ ವಿದಿಶಾದಲ್ಲಿ ನಡೆದಿದೆ.
ಪರಿಣಿತಾ ಜೈನ್(23) ಮೃತಪಟ್ಟ ಯುವತಿಯಾಗಿದ್ದಾಳೆ. ಎಂಬಿಎ ಪದವಿ ವ್ಯಾಸಂಗ ಮಾಡುತ್ತಿದ್ದ ಪರಿಣಿತಾ ಆಕೆಯ ಸಹೋದರಿಯ ಮದುವೆಗಾಗಿ ವಿದಿಶಾಗೆ ಆಗಮಿಸಿದ್ದರು.
ಆಶಾ ಭೋಸ್ಲೆ ಹಾಗೂ ಸೋನು ನಿಗಮ್ ಅವರು ಹಾಡಿರುವ ಶರಾರಾ…ಶರಾರಾ ಎಂಬ ಹಿಂದಿ ಗೀತೆಗೆ ಡ್ಯಾನ್ಸ್ ಮಾಡುವಾಗ ಆಕೆಗೆ ಹೃದಯಾಘಾತವಾಗಿದ್ದು, ವೇದಿಕೆ ಮೇಲೆಯೇ ಕುಸಿದು ಸಾವನ್ನಪ್ಪಿದ್ದಾರೆ. ಈ ಕುರಿತ ವಿಡಿಯೋ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ.
ಯುವತಿ ವೇದಿಕೆ ಮೇಲೆ ಕುಸಿಯುತ್ತಿದ್ದಂತೆಯೇ ಅಲ್ಲಿದ್ದ ಸಂಬಂಧಿಕರು ಆಕೆಗೆ ಸಿಪಿಆರ್ ನೀಡಿದ್ದು, ಆಗಲೂ ಆಕೆ ಎಚ್ಚರಗೊಳ್ಳದ ಕಾರಣ ಕೂಡಲೇ ಆಕೆಯನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಿದ್ದಾರೆ. ಆದರೆ ಯುವತಿಯ ಪ್ರಾಣ ವೇದಿಕೆಯಲ್ಲಿ ಹೃದಯಾಘಾತವಾಗಿ ಬಿದ್ದಾಗಲೇ ಸಾವಾಗಿದೆ ಎಂದು ವೈದ್ಯರು ಖಚಿತಪಡಿಸಿದ್ದಾರೆ.
ಪರಿಣಿತಾ ಅವರ 12 ವರ್ಷ ಸಹೋದರ ಕೂಡ ಈ ಹಿಂದೆ ಇದೇ ರೀತಿ ಹೃದಯಾಘಾತಕ್ಕೀಡಾಗಿ ಸಾವನ್ನಪ್ಪಿದ್ದ ಎಂದು ಕುಟುಂಬದ ಮೂಲಗಳು ತಿಳಿಸಿವೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/HirBanj7uz4I4A2vAG5yXx