ಬೆಂಗಳೂರು: ಆಟೋಗೆ ಲಾರಿ ಡಿಕ್ಕಿ ಹೊಡೆದ ಪರಿಣಾಮ ಕೇರಳ ಮೂಲದ ಯುವತಿಯೊಬ್ಬರು ಸಾವನ್ನಪ್ಪಿರುವ ದಾರುಣ ಘಟನೆ ಕಬ್ಬನ್ಪಾರ್ಕ್ ಸಂಚಾರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ಶಾಲಿನಿ (24) ಮೃತಪಟ್ಟ ಯುವತಿಯಾಗಿದ್ದು, ಬೆನ್ ಸನ್ ಟೌನ್ ನ ಚಿನ್ನಪ್ಪಗಾರ್ಡನ್ ನಿಂದ ಶಾಲಿನಿ ಅವರು ಯಾತ್ರಿ ಆ್ಯಪ್ ಮೂಲಕ ಆಟೋ ಬುಕ್ ಮಾಡಿಕೊಂಡು ಮೆಜೆಸ್ಟಿಕ್ ಕಡೆಗೆ ಮುಂಜಾನೆ 4 ಗಂಟೆ ಸುಮಾರಿನಲ್ಲಿ ಹೋಗುತ್ತಿದ್ದರು ಈ ವೇಳೆ ಈ ದುರ್ಘಟನೆ ನಡೆದಿದೆ.
ಪೊಲೀಸ್ ತಿಮಯ್ಯ ಜಂಕ್ಷನ್ ಬಳಿ ಆಟೋದ ಹಿಂದಿನಿಂದ ಅತಿವೇಗ ಹಾಗೂ ಅಜಾಗರೂಕತೆಯಿಂದ ಸಿಗ್ನಲ್ ಜಂಪ್ ಮಾಡಿಕೊಂಡು ಬಂದ ಲೋಡ್ ಲಾರಿ ಆಟೋಗೆ ಹಿಂದಿನಿಂದ ಡಿಕ್ಕಿ ಹೊಡೆದಿದೆ. ಪರಿಣಾಮ ಯುವತಿ ಗಂಭೀರಗಾಯಗೊಂಡರು. ತಕ್ಷಣ ಯುವತಿಯನ್ನು ಆಸ್ಪತ್ರೆಗೆ ಕರೆದೊಯ್ಯಲಾಯ್ತು. ಆದರೆ ಮಾರ್ಗ ಮಧ್ಯೆ ಯುವತಿ ಮೃತಪಟ್ಟಿದ್ದಾರೆ. ಆಟೋ ಚಾಲಕ ಇಮ್ರಾನ್ ಪವಾಡ ರೀತಿಯಲ್ಲಿ ಬದುಕುಳಿದಿದ್ದಾರೆ.
ಅಪಘಾತದ ಬಳಿಕ ಲಾರಿ ಚಾಲಕ ಲಾರಿಯನ್ನು ಸ್ಥಳದಲ್ಲೇ ಬಿಟ್ಟು ಪರಾರಿಯಾಗಿದ್ದಾನೆ. ಕಬ್ಬನ್ಪಾರ್ಕ್ ಸಂಚಾರಿ ಠಾಣೆ ಪೊಲೀಸರು ಸ್ಥಳಕ್ಕೆ ಆಗಮಿಸಿ, ಪರಿಶೀಲನೆ ನಡೆಸಿದ್ದಾರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296