ಬೆಂಗಳೂರು: ಯುವತಿಯೊಬ್ಬಳು ಆಟೋ ಚಾಲಕನಿಗೆ ಸಾರ್ವಜನಿಕ ಸ್ಥಳದಲ್ಲೇ ಚಪ್ಪಲಿಯಲ್ಲಿ ಹೊಡೆದ ಅಮಾನವೀಯ ಘಟನೆ ನಗರದ ಬೆಳ್ಳಂದೂರಿನಲ್ಲಿ ನಡೆದಿದೆ.
ಆಟೋ ಚಾಲಕ ಬೆಳ್ಳಂದೂರಿಗೆ ಬಾಡಿಗೆಗೆ ಬಂದಿದ್ದರು. ಈ ವೇಳೆ ಸೆಂಟ್ರಲ್ ಮಾಲ್ ಬಳಿ ಬೈಕ್ನಲ್ಲಿ ಬಂದ ಯುವತಿ, ನೀನು ನಮ್ಮ ವಾಹನಕ್ಕೆ ಟಚ್ ಮಾಡಿದ್ದೀಯಾ ಎಂದು ಆಟೋ ಚಾಲಕನ ಬಳಿ ಹಿಂದಿಯಲ್ಲಿ ಗಲಾಟೆ ಆರಂಭಿಸಿದ್ದಾಳೆ. ಅಲ್ಲದೇ ಅವರ ಮೇಲೆ ಚಪ್ಪಲಿಯಲ್ಲಿ ಹಲ್ಲೆ ನಡೆಸಿದ್ದಾಳೆ.
ಯುವತಿ ಹಲ್ಲೆ ನಡೆಸಿರುವ ವೀಡಿಯೋ ಮೊಬೈಲ್ನಲ್ಲಿ ಸೆರೆಯಾಗಿದೆ. ಹಲ್ಲೆ ನಡೆಸುವ ವೇಳೆ, ಸಾರ್ವಜನಿಕರು ಆಟೋ ಚಾಲಕನ ನೆರವಿಗೆ ಬಂದಿದ್ದು, ಯುವತಿಯನ್ನು ಪ್ರಶ್ನಿಸಿದ್ದಾರೆ. ಈ ವೇಳೆ ಪೊಲೀಸ್ ಠಾಣೆಗೆ ಬರುವುದಾಗಿ ಹೇಳಿ ಯುವತಿ ಹಾಗೂ ಆಕೆಯ ಜೊತೆಗಿದ್ದ ಯುವಕ ಇಬ್ಬರೂ ಪರಾರಿಯಾಗಿದ್ದಾರೆ.
ಈ ವಿಚಾರವಾಗಿ ಯುವತಿಯನ್ನು ಠಾಣೆಗೆ ಕರೆಸಿ ಕಾನೂನಾತ್ಕವಾಗಿ ಕ್ರಮ ಜರುಗಿಸಬೇಕು ಎಂದು ಆಟೋ ಚಾಲಕ ಬೆಳ್ಳಂದೂರು ಠಾಣೆಯಲ್ಲಿ ದೂರು ನೀಡಿದ್ದಾರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/KN8LiGgEw492Ijygqm0dVW