ದೆಹಲಿ: 20 ವರ್ಷ ವಯಸ್ಸಿನ ಯುವತಿಯೊಬ್ಬಳ ಮೃತದೇಹ ದೆಹಲಿಯ ಶಹದಾರಾದ ಜಿಟಿಬಿ ಎನ್ಕ್ಲೇವ್ ಬಳಿ ಪತ್ತೆಯಾಗಿದ್ದು, ಮೃತದೇಹದ ಮೇಲೆ ಬುಲೆಟ್ ಗುರುತು ಪತ್ತೆಯಾಗಿದ್ದು, ಆಕೆ ಗುಂಡೇಟಿನಿಂದ ಮೃತಪಟ್ಟಿರಬಹುದು ಎಂದು ಪೊಲೀಸರು ಶಂಕಿಸಿದ್ದಾರೆ.
ಯುವತಿಯೊಬ್ಬಳಿಗೆ ಗುಂಡು ಹಾರಿಸಲಾಗಿದೆ ಎಂದು ನಮಗೆ ಕರೆ ಬಂದಿತ್ತು. ಜಿಟಿಬಿ ಎನ್ ಕ್ಲೇವ್ ಪ್ರದೇಶದಲ್ಲಿ ಶವ ಪತ್ತೆಯಾಗಿದೆ. ಸುಮಾರು 20 ವರ್ಷ ವಯಸ್ಸಿನವಳಂತೆ ಕಾಣುತ್ತಿದ್ದಾಳೆ. ಮೃತದೇಹದ ಮೇಲೆ 2 ಗುಂಡೇಟಿನ ಗುರುತು ಇದೆ ಎಂದು ಹೆಚ್ಚುವರಿ ಉಪ ಪೊಲೀಸ್ ಆಯುಕ್ತೆ ನೇಹಾ ತಿಳಿಸಿದರು.
ಯುವತಿಯ ಗುರುತು ಇನ್ನೂ ತಿಳಿದಿಲ್ಲ, ಮತ್ತು ಮರಣೋತ್ತರ ಪರೀಕ್ಷೆಯಿಂದ ಹೆಚ್ಚಿನ ವಿವರಗಳು ತಿಳಿದುಬರುತ್ತವೆ ಎಂದು ಪೊಲೀಸರು ತಿಳಿಸಿದ್ದಾರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/KN8LiGgEw492Ijygqm0dVW