ತುಮಕೂರು: ತುಮಕೂರು ವಿಶ್ವವಿದ್ಯಾನಿಲಯದ ವತಿಯಿಂದ ಜನವರಿ 7ರಂದು ಬೆಳಿಗ್ಗೆ 10 ಗಂಟೆಗೆ ತುಮಕೂರು ವಿಶ್ವವಿದ್ಯಾನಿಲಯದ ಸರ್ ಎಂ.ವಿಶ್ವೇಶ್ವರಯ್ಯ ಸಭಾಂಗಣದಲ್ಲಿ “ಯುವಜನ ಹಾಗೂ ಸಹಕಾರ ಸಂವಾದ” ಕಾರ್ಯಕ್ರಮವನ್ನು ಏರ್ಪಡಿಸಲಾಗಿದೆ.
ತುಮಕೂರು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ.ಎಂ.ವೆಂಕಟೇಶ್ವರಲು ಉದ್ಘಾಟಿಸುವರು. ಕರ್ನಾಟಕ ರಾಜ್ಯ ಸೌಹಾರ್ದ ಸಂಯುಕ್ತ ಸಹಕಾರಿ ನಿಯಮಿತದ ಅಧ್ಯಕ್ಷ ಜಿ.ನಂಜನಗೌಡ ಸಿ.ಎ. ಅಧ್ಯಕ್ಷತೆವಹಿಸುವರು. ಮೈಸೂರು ವಿಶ್ವವಿದ್ಯಾನಿಲಯದ ಸಂದರ್ಶಕ ಪ್ರಾಧ್ಯಾಪಕ ಡಾ.ಎ.ಆರ್. ಶ್ರೀನಾಥ್ ಅವರು ಯುವಕರು ಮತ್ತು ಸಹಕಾರ ಕುರಿತು ವಿಷಯ ಮಂಡನೆ ಮಾಡಲಿದ್ದಾರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Bc4BbJiZ9pF3L0M4QgZdQ4