ಬೀದರ್: ಕರ್ನಾಟಕ ಪ್ರದೇಶ ಯುವ ಕಾಂಗ್ರೆಸ್ ಚುನಾವಣೆಯಲ್ಲಿ ಬೀದರ್ ಜಿಲ್ಲೆಯಿಂದ ದಾವಿದ ಕೆಂಪೆ ಆಯ್ಕೆಯಾಗಿದ್ದಾರೆ. ದಾವಿದ ಕೆಂಪೆ ಮೊದಲ ಬಾರಿಗೆ ಚುನಾವಣೆ ಎದುರಿಸುತ್ತಿದ್ದು, ಮೊದಲ ಚುನಾವಣೆಯಲ್ಲೇ ಗೆಲುವು ದಾಖಲಿಸಿದ್ದಾರೆ.
ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸ್ಥಾನಕ್ಕೆ ಸ್ಪರ್ಧಿಸಿ ಗೆಲುವು ದಾಖಲಿಸಿದ ಬಳಿಕ ಮಾತನಾಡಿದ ಅವರು, ಈ ಗೆಲುವಿನ ಮೂಲಕ ನನ್ನ ರಾಜಕೀಯ ಜೀವನದಲ್ಲಿ ಮುಂದೆ ಸಾಗಲು ಅವಕಾಶ ಮಾಡಿಕೊಟ್ಟ ಯುವ ಸಮೂಹಕ್ಕೆ ಧನ್ಯವಾದಗಳನ್ನು ತಿಳಿಸಿದರು.
ಜಿಲ್ಲಾ ಉಸ್ತುವಾರಿ ಸಚಿವರಾದ ಈಶ್ವರ ಖಂಡ್ರೆ, ಬೀದರ್ ಸಂಸದರಾದ ಸಾಗರ ಖಂಡ್ರೆ ಅವರ ಮಾರ್ಗದರ್ಶನದಲ್ಲಿ ಕಾಂಗ್ರೆಸ್ ಪಕ್ಷ ಸಂಘಟನೆ ಗಟ್ಟಿಗೊಳ್ಳಿಸಲು ನಾನು ಶ್ರಮ ವಹಿಸುತ್ತೇನೆ ಎಂದು. ದಾವಿದ ಕೆಂಪೆ ತಿಳಿಸಿದರು.
ವರದಿ: ಅರವಿಂದ ಮಲ್ಲಿಗೆ, ಬೀದರ್
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Bc4BbJiZ9pF3L0M4QgZdQ4