nammatumakuru

    Subscribe to Updates

    Get the latest creative news from FooBar about art, design and business.

    What's Hot

    ತುಮಕೂರು: UGD ಓಪನ್ ಆಗಿ ಸಾರ್ವಜನಿಕರಿಗೆ ತೊಂದರೆ, ಪಾಲಿಕೆ ಮೌನ

    June 12, 2026

    ಕೆಂಚಮ್ಮನಹಳ್ಳಿ ಗ್ರಾಮದ ನವೀನ್ ಕೆ. ಅವರಿಗೆ ದಾವಣಗೆರೆ ವಿವಿಯಿಂದ ಪಿಎಚ್.ಡಿ ಪದವಿ ಪ್ರದಾನ

    June 12, 2026

    ಮರಿದಾಸನಹಳ್ಳಿ ಗ್ರಾಮಕ್ಕೆ ಕೆಪಿಎಸ್ ಶಾಲೆ ಮಂಜೂರು: ಹೆಚ್.ವಿ.ವೆಂಕಟೇಶ್ ಅವರಿಗೆ ಗ್ರಾಮಸ್ಥರಿಂದ ಅಭಿನಂದನೆ

    June 12, 2026
    Facebook Twitter Instagram
    ಟ್ರೆಂಡಿಂಗ್
    • ತುಮಕೂರು: UGD ಓಪನ್ ಆಗಿ ಸಾರ್ವಜನಿಕರಿಗೆ ತೊಂದರೆ, ಪಾಲಿಕೆ ಮೌನ
    • ಕೆಂಚಮ್ಮನಹಳ್ಳಿ ಗ್ರಾಮದ ನವೀನ್ ಕೆ. ಅವರಿಗೆ ದಾವಣಗೆರೆ ವಿವಿಯಿಂದ ಪಿಎಚ್.ಡಿ ಪದವಿ ಪ್ರದಾನ
    • ಮರಿದಾಸನಹಳ್ಳಿ ಗ್ರಾಮಕ್ಕೆ ಕೆಪಿಎಸ್ ಶಾಲೆ ಮಂಜೂರು: ಹೆಚ್.ವಿ.ವೆಂಕಟೇಶ್ ಅವರಿಗೆ ಗ್ರಾಮಸ್ಥರಿಂದ ಅಭಿನಂದನೆ
    • “ಹೌದು ನಾನು ಏಜೆಂಟ್, ಆದರೆ ಮಾಫಿಯಾ ಕಮಿಷನ್ ಏಜೆಂಟ್ ಅಲ್ಲ”: ಸಿಎಂ ಡಿಕೆಶಿಗೆ ಆರ್. ಅಶೋಕ್ ತಿರುಗೇಟು
    • 26 ವರ್ಷಗಳ ಹಿಂದೆ ಸರ್ಕಸ್ ಕಂಪನಿ ಜೊತೆ ಓಡಿಹೋಗಿದ್ದ ಸತೀಶ್ ‘ಸಲೀಂ’ ಆಗಿ ಮನೆಗೆ ವಾಪಸ್!
    • ಅಕ್ರಮ ಸಂಬಂಧಕ್ಕೆ ಮಹಿಳೆ ಬಲಿ; ಪ್ರಿಯಕರನ ಬಂಧನ!
    • ರೈತರ ಬಗ್ಗೆ ಅವಹೇಳನಕಾರಿ ಹೇಳಿಕೆ ಆರೋಪ: KRS ಅಧ್ಯಕ್ಷ ರವಿ ಕೃಷ್ಣಾ ರೆಡ್ಡಿ ವಿರುದ್ಧ ಕೇಸು ದಾಖಲು
    • ಸಿರಾ: ಟಿ.ಬಿ.ಜಯಚಂದ್ರ ಅವರಿಗೆ ಸಚಿವ ಸ್ಥಾನ ನೀಡಲು ಬ್ಲಾಕ್ ಕಾಂಗ್ರೆಸ್ ಒತ್ತಾಯ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಯುವಜನತೆ ಮಾದಕ ವಸ್ತುಗಳ ವ್ಯಸನದಿಂದ ಮುಕ್ತರಾಗಬೇಕು: ಜಿಲ್ಲಾ ಹೆಚ್ಚುವರಿ ಪೊಲೀಸ್ ವರಿಷ್ಟಾಧಿಕಾರಿ ಸಿ.ಗೋಪಾಲ್
    ತುಮಕೂರು April 19, 2025

    ಯುವಜನತೆ ಮಾದಕ ವಸ್ತುಗಳ ವ್ಯಸನದಿಂದ ಮುಕ್ತರಾಗಬೇಕು: ಜಿಲ್ಲಾ ಹೆಚ್ಚುವರಿ ಪೊಲೀಸ್ ವರಿಷ್ಟಾಧಿಕಾರಿ ಸಿ.ಗೋಪಾಲ್

    By adminApril 19, 2025No Comments2 Mins Read
    neharu yuva kendra

    ತುಮಕೂರು: ಯುವಜನತೆ ಮಾದಕ ವಸ್ತುಗಳ ವ್ಯಸನದಿಂದ ದೂರವಿದ್ದು, ರಾಷ್ಟ್ರ ನಿರ್ಮಾಣಕ್ಕೆ ಅಮೂಲ್ಯ ಕೊಡುಗೆಗಳನ್ನು ನೀಡಿದಾಗ ಮಾತ್ರ ಭವ್ಯ ಭಾರತದ ಕನಸು ನನಸಾಗುತ್ತದೆ. ಯುವ ಜನತೆ ಎಲ್ಲಾ ರೀತಿಯ ಮಾದಕ ವಸ್ತುಗಳ ವ್ಯಸನದಿಂದ ಮುಕ್ತರಾಗಬೇಕು ಎಂದು ಜಿಲ್ಲಾ ಹೆಚ್ಚುವರಿ ಪೊಲೀಸ್ ವರಿಷ್ಟಾಧಿಕಾರಿ ಸಿ.ಗೋಪಾಲ್ ತಿಳಿಸಿದರು.

    ಅವರು ಭಾರತ ಸರ್ಕಾರದ ಕೇಂದ್ರ ಯುವ ಕಾರ್ಯಕ್ರಮ ಹಾಗೂ ಕ್ರೀಡಾ ಸಚಿವಾಲಯದ ನೆಹರು ಯುವ ಕೇಂದ್ರ, ಚೇಳೂರು ಸಂಜೀವಿನಿ ಯುವಜನ ಸಂಘ, ಸುಫಿಯಾ ಕಾನೂನು ಮಹಾವಿದ್ಯಾಲಯ ಹಾಗೂ ಇನ್ಹರ್ ವೀಲ್‌ಕ್ಲಬ್ ಆಫ್ ತುಮಕೂರು ಸೆಂಟ್ರಲ್ ಇವರ ಸಹಯೋಗದಲ್ಲಿ ಗುರುವಾರ ನಗರದಲ್ಲಿ ಹಮ್ಮಿಕೊಂಡಿದ್ದ ಮಾದಕ ವ್ಯಸನ, ಮಾದಕ ವಸ್ತುಗಳ ದುಷ್ಪರಿಣಾಮ ಹಾಗೂ ಸೈಬರ್ ಅಪರಾಧಗಳ ಕುರಿತು ಜಾಗೃತಿ ಮತ್ತು ಉಪನ್ಯಾಸ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.


    Provided by
    Provided by

    ಹಿಂದುಳಿದ ರಾಷ್ಟ್ರಗಳ ಗ್ರಾಮೀಣ ಪ್ರದೇಶಗಳಲ್ಲಿ ಯುವಜನರು ಮಾದಕ ವ್ಯಸನಕ್ಕೆ ಬಲಿಯಾಗಿ ತಮ್ಮ ಅಮೂಲ್ಯ ಜೀವನವನ್ನು ಹಾಳು ಮಾಡಿಕೊಳ್ಳುತ್ತಿರುವುದು ದುರ್ದೈವದ ಸಂಗತಿ ಎಂದರು.

    ಸೈಬರ್ ಕ್ರೈಮ್ ಕುರಿತು ನಾಗರಿಕರು ಎಚ್ಚರಿಕೆಯಿಂದಿರಬೇಕು ಎಂದರು. ಇತ್ತೀಚೆಗೆ ಶಾಲಾ ಕಾಲೇಜಿನ ವಿದ್ಯಾರ್ಥಿಗಳು ಗಾಂಜಾ ಹಾಗೂ ಡ್ರಗ್ಸ್ ಸೇವನೆ ಮಾಡುತ್ತಿರುವುದು ಇಲಾಖೆ ಗಮನಕ್ಕೆ ಬಂದಿದ್ದು, ಅಂತವರ ಮೇಲೆ ಎನ್.ಡಿ.ಪಿ.ಎಸ್. ಆಕ್ಟ್ ಕಾಯಿದೆ ಅಡಿ ಸೂಕ್ತ ಕಾನೂನಿನ ಕ್ರಮ ಜರುಗಿಸಲಾಗುವುದು ಎಂದರು.

    ಸೈಬರ್ ಪ್ರಕರಣಗಳನ್ನು ತಡೆಯುವ ಸಲುವಾಗಿ ಜಿಲ್ಲಾ ಮಟ್ಟದಲ್ಲಿ ಸೈಬರ್ ಕ್ರೈಂ ಠಾಣೆಗಳನ್ನು ಸ್ಥಾಪಿಸಲಾಗಿದೆ ಎಂದರು. ಯಾರೇ ಆಗಲೀ ತಮ್ಮ ಕೌಟುಂಬಿಕ ಜೀವನದ ವೈಯಕ್ತಿಕ ಫೋಟೋಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಳ್ಳಬಾರದು ಎಂದರು.

    ಮಾಜಿ ಶಾಸಕ ಡಾ.ಎಸ್.ಶಷೀ ಅಹಮ್ಮದ್ ಮಾತನಾಡಿ, ಯುವಕರು ಸಾಮಾಜಿಕ ಸ್ಥಾನಮಾನ ಪಡೆದುಕೊಳ್ಳುವ ವೇಗದಲ್ಲಿ ಮಾದಕ ವಸ್ತುಗಳ ವ್ಯಸನಕ್ಕೆ ಬಲಿಯಾಗಿ ಸಮಾಜದ ಸ್ವಾಸ್ಥ್ಯ ಹಾಳು ಮಾಡುತ್ತಿರುವುದು ಸರಿಯಲ್ಲ. ಉತ್ತಮ ಜೀವನ ಶೈಲಿಯನ್ನು ಅಳವಡಿಸಿಕೊಂಡು ಉತ್ತಮ ಪ್ರಜೆಗಳಾಗಬೇಕು ಎಂದರು. ನಿವೃತ್ತ ಆರೋಗ್ಯ ನಿರೀಕ್ಷಕ ರುದ್ರಮೂರ್ತಿ ಮಾತನಾಡಿ, ತಂಬಾಕಿನಿಂದಾಗುವ ದುಷ್ಪರಿಣಾಮಗಳು ಹಾಗೂ ಮುಂಜಾಗ್ರತಾ ಕ್ರಮಗಳ ಬಗ್ಗೆ ವಿಶೇಷ ಉಪನ್ಯಾಸ ನೀಡಿದರು.

    ಸರಿಗಮಪ ಖ್ಯಾತಿಯ ಕಿರುತೆರೆ ಕಲಾವಿದೆ ಹಾಗೂ ಸಿದ್ದಾಗಂಗಾ ವೈದ್ಯಕೀಯ ಹಾಗೂ ಸಂಶೋಧನಾ ಆಸ್ಪತ್ರೆಯ ವೈದ್ಯೆ ಡಾ.ಶ್ರಾವ್ಯ ಮಾದಕ ವಸ್ತುಗಳಿಂದಾಗುವ ದುಷ್ಪರಿಣಾಮಗಳ ಕುರಿತು ಮಾತನಾಡಿ ಗೀತಗಾಯನವನ್ನು ನಡೆಸಿಕೊಟ್ಟರು.

    ಕಾರ್ಯಕ್ರಮದಲ್ಲಿ ಕಾರ್ಯಕ್ರಮ ಸಂಯೋಜಕ ರಾಜಶೇಖರ್ ಕೆ. ಪ್ರಾಸ್ತಾವಿಕ ನುಡಿಗಳಾನ್ನಾಡಿದರು. ಪ್ರಾಂಶುಪಾಲ ಡಾ.ಎಸ್.ರಮೇಶ್ ಉಪಸ್ಥಿತರಿದ್ದು, ಇನ್ಹರ್ ವೀಲ್‌ಕ್ಲಬ್ ಆಫ್ ತುಮಕೂರು ಸೆಂಟ್ರಲ್ ಅಧ್ಯಕ್ಷೆ ಯಶೋಧರಾಜಣ್ಣ, ಕಾರ್ಯದರ್ಶಿ ಗಾಯತ್ರಿ ಪ್ರಸಾದ್, ಸೂಫಿಯಾ ಕಾನೂನು ಕಾಲೇಜಿನ ಪ್ರಾಧ್ಯಾಪಕ ಮಮತ, ಉಪಪ್ರಾಂಶುಪಾಲ ಓಬಯ್ಯ ಹಾಗೂ ಕಾನೂನು ವಿದ್ಯಾರ್ಥಿಗಳು ಮತ್ತು ಸಿಬ್ಬಂದಿ ವರ್ಗ ಭಾಗವಹಿಸಿದ್ದರು. ನರಸಿಂಹಮೂರ್ತಿ ನಿರೂಪಿಸಿದರು. ಪ್ರೇಮ ಮತ್ತು ಸಂಗಡಿಗರು ಪ್ರಾರ್ಥಿಸಿದರು.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/KN8LiGgEw492Ijygqm0dVW

    admin
    • Website

    Related Posts

    ತುಮಕೂರು: UGD ಓಪನ್ ಆಗಿ ಸಾರ್ವಜನಿಕರಿಗೆ ತೊಂದರೆ, ಪಾಲಿಕೆ ಮೌನ

    June 12, 2026

    ತುಮಕೂರು ವಿಶ್ವವಿದ್ಯಾನಿಲಯ: ವಿವಿಧ ಪದವಿಗಳ ಉಳಿಕೆ ಸೀಟುಗಳ ಪ್ರವೇಶಾತಿಗೆ ಅರ್ಜಿ ಆಹ್ವಾನ

    June 11, 2026

    ತುಮಕೂರು: ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಹಾಸ್ಟೆಲ್ ಪ್ರವೇಶಕ್ಕೆ ಅರ್ಜಿ ಆಹ್ವಾನ

    June 10, 2026

    Comments are closed.

    Our Picks

    ಮಗಳ ಗಂಡನನ್ನೇ ವರಿಸಿದ ಅತ್ತೆ: ಕದ್ದುಮುಚ್ಚಿ ಶುರುವಾದ ಪ್ರೀತಿಗೆ ಬಿತ್ತು ಮದುವೆ ಮುದ್ರೆ!

    June 8, 2026

    ಪೈಲ್ವಾನ್ ಜೊತೆ ಕುಸ್ತಿಯಾಡು ಎಂದು ಹೆಂಡತಿಯನ್ನೇ ಮುಂದೆ ಬಿಟ್ಟ ಖ್ಯಾತ ನಟ: ಮುಂದೇನಾಯ್ತು?

    June 8, 2026

    ಪತ್ನಿಗೆ ರಾಜ್ಯಸಭಾ ಆಫರ್ ನಿರಾಕರಿಸಿದ ಸಿದ್ದರಾಮಯ್ಯ; 3 ಡಿಸಿಎಂ ಹುದ್ದೆಗಾಗಿ ಪಟ್ಟು!

    June 1, 2026

    ದ್ವೇಷ ಭಾಷಣ ಮಸೂದೆಗೆ ಕೇಂದ್ರ ಗೃಹ ಸಚಿವಾಲಯ ಬ್ರೇಕ್: ಕರ್ನಾಟಕ ಸರ್ಕಾರಕ್ಕೆ ಭಾರಿ ಹಿನ್ನಡೆ!

    May 26, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    ತುಮಕೂರು: UGD ಓಪನ್ ಆಗಿ ಸಾರ್ವಜನಿಕರಿಗೆ ತೊಂದರೆ, ಪಾಲಿಕೆ ಮೌನ

    June 12, 2026

    ತುಮಕೂರು:  ನಗರದ ಬೆಳವಣಿಗೆಯ ಜೊತೆಜೊತೆಗೆ ಮೂಲಭೂತ ಸಮಸ್ಯೆಗಳು ದಿನದಿಂದ ದಿನಕ್ಕೆ ಹೆಚ್ಚಾಗುತ್ತಿವೆ. ಸ್ಮಾರ್ಟ್ ಸಿಟಿ ಯೋಜನೆಯಡಿ ನಿರ್ಮಿಸಿರುವ UGD ಚರಂಡಿಗಳ…

    ಕೆಂಚಮ್ಮನಹಳ್ಳಿ ಗ್ರಾಮದ ನವೀನ್ ಕೆ. ಅವರಿಗೆ ದಾವಣಗೆರೆ ವಿವಿಯಿಂದ ಪಿಎಚ್.ಡಿ ಪದವಿ ಪ್ರದಾನ

    June 12, 2026

    ಮರಿದಾಸನಹಳ್ಳಿ ಗ್ರಾಮಕ್ಕೆ ಕೆಪಿಎಸ್ ಶಾಲೆ ಮಂಜೂರು: ಹೆಚ್.ವಿ.ವೆಂಕಟೇಶ್ ಅವರಿಗೆ ಗ್ರಾಮಸ್ಥರಿಂದ ಅಭಿನಂದನೆ

    June 12, 2026

    “ಹೌದು ನಾನು ಏಜೆಂಟ್, ಆದರೆ ಮಾಫಿಯಾ ಕಮಿಷನ್ ಏಜೆಂಟ್ ಅಲ್ಲ”: ಸಿಎಂ ಡಿಕೆಶಿಗೆ ಆರ್. ಅಶೋಕ್ ತಿರುಗೇಟು

    June 11, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.