ಚಾಮರಾಜನಗರ: ಯುವತಿಯ ಎದುರೇ ಯುವಕನೊಬ್ಬ ತನ್ನ ಎದೆಗೆ ಇರಿದುಕೊಂಡು ಹುಚ್ಚಾಟ ಮೆರೆದಿರುವ ಘಟನೆ ಚಾಮರಾಜನಗರ ಬಸ್ ನಿಲ್ದಾಣದಲ್ಲಿ ನಡೆದಿದೆ.
ಪ್ರದೀಪ್ ಎಂಬಾತ ಪ್ರೀತಿಸುವಂತೆ ಪದವಿ ವಿದ್ಯಾರ್ಥಿನಿ ಹಿಂದೆ ಬಿದ್ದಿದ್ದ. ಯುವತಿ ಎದುರೇ ತನ್ನ ಎದೆಗೆ ಚಾಕುವನಿಂದ ಇರಿದುಕೊಂಡಿದ್ದಾನೆ ಎಂದು ತಿಳಿದು ಬಂದಿದೆ.
ಸದ್ಯ ಗಾಯಾಳು ಪ್ರದೀಪ್ನನ್ನು ಸಿಮ್ಸ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ. ಪ್ರದೀಪ್ ಚಾಮರಾಜನಗರ ತಾಲೂಕಿನ ಸಾಣೇಗಾಲ ಗ್ರಾಮದ ನಿವಾಸಿಯಾಗಿದ್ದು. ಪ್ರೀತಿಸುವಂತೆ ಪದವಿ ವಿದ್ಯಾರ್ಥಿನಿ ಹಿಂದೆ ಬಿದ್ದಿದ್ದ ಎಂದು ತಿಳಿದು ಬಂದಿದೆ.
ಸದ್ಯ ಘಟನೆ ನಡೆದ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ. ವಿದ್ಯಾರ್ಥಿನಿಯ ಪೋಷಕರ ದೂರಿನನ್ವಯ ಚಾಮರಾಜನಗರ ಪಟ್ಟಣ ಪೊಲೀಸ್ ಠಾಣೆಯಲ್ಲಿ ಪೋಕ್ಸೋ ಕೇಸ್ ದಾಖಲಾಗಿದೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC