ವಿಜಯಪುರ: ಹಿಂದೂ ಯುವಕರು ಮುಸ್ಲಿಂ ಯುವತಿಯನ್ನು ಮದುವೆಯಾದರೇ ಅವರಿಗೆ 5 ಲಕ್ಷ ರೂ. ನೀಡುವುದಾಗಿ ಘೋಷಣೆ ಮಾಡಿದ್ದ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಕಾರಿಗೆ ಮುತ್ತಿಗೆ ಹಾಕಿ ಕಪ್ಪು ಬಟ್ಟೆ ಪ್ರದರ್ಶಿಸಿದ ಘಟನೆ ವಿಜಯಪುರ ಜಿಲ್ಲೆಯ ಆಲಮೇಲ ಪಟ್ಟಣದಲ್ಲಿ ನಡೆದಿದೆ.
ಪಟ್ಟಣದ ಸಿದ್ಧಸಿರಿ ಸಹಕಾರಿ ಬ್ಯಾಂಕ್ ಶಾಖೆ ಹಾಗೂ ಎಸ್ ಮಾರ್ಟ್ ಉದ್ಘಾಟನಾ ಕಾರ್ಯಕ್ರಮಕ್ಕೆ ಯತ್ನಾಳ್ ಆಗಮಿಸಿದ್ದ ವೇಳೆ ಈ ಘಟನೆ ನಡೆದಿದೆ.
ಕೂಡಲೇ ಪೊಲೀಸರು ಕಪ್ಪು ಬಟ್ಟೆ ಪ್ರದರ್ಶಿಸಿದ ಯುವಕರನ್ನು ತಡೆದು, ವಶಕ್ಕೆ ಪಡೆದರು. ಆಲಮೇಲದಲ್ಲಿ ಕೆಲಕಾಲ ಗೊಂದಲದ ವಾತಾವರಣ ನಿರ್ಮಾಣವಾಗಿತ್ತು.
ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಗೆ ಕಪ್ಪು ಬಟ್ಟೆ ಪ್ರದರ್ಶಿಸಿದ್ದ ಮುಸ್ಲಿಂ ಯುವಕರನ್ನು ಪೊಲೀಸರು ವಶಕ್ಕೆ ಪಡೆದುಕೊಂಡರು. ಬಳಿಕ, ಯುವಕರ ಕುಟುಂಬದ ಮಹಿಳೆಯರು ಕಾರ್ಯಕ್ರಮದ ಸ್ಥಳಕ್ಕೆ ಆಗಮಿಸಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಭೇಟಿಗೆ ಅವಕಾಶ ನೀಡುವಂತೆ ಪೊಲೀಸರ ಎದುರು ಪಟ್ಟು ಹಿಡಿದರು. ಆದರೆ, ಪೊಲೀಸರು ಭೇಟಿ ಅವಕಾಶ ನೀಡಲಿಲ್ಲ. ದೂರು ಕೊಡಿ ರಜಿಸ್ಟರ್ ಮಾಡಿಕೊಳ್ಳುತ್ತೇವೆ. ಗಲಾಟೆ ಮಾಡಲು ಬಿಡಲ್ಲವೆಂದರು.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC