ಬೆಳಗಾವಿ: ಮೇ.18ರ ಬೆಳಗ್ಗೆ ಮಾರಿಹಾಳ ಸರ್ಕಾರಿ ಶಾಲೆಯ ಕೊಠಡಿ ಎದುರು ಮಹಾಂತೇಶ ಕರಲಿಂಗಣ್ಣವರ್ (24) ಮೃತದೇಹ ಇತ್ತು. ಯುವಕನನ್ನ ಮಚ್ಚಿನಿಂದ ಕೊಚ್ಚಿ ಬರ್ಬರವಾಗಿ ಯಾರೂ ಹತ್ಯೆ ಮಾಡಿದ್ದರು. ಈ ಬಗ್ಗೆ ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದ ಮಾರಿಹಾಳ ಪೊಲೀಸರು, ಘಟನೆ ನಡೆದ 24 ಗಂಟೆಗಳ ಹಿಂದೆ ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ.
ಸುಳೇಭಾವಿ ನಿವಾಸಿ ಅಕ್ಷಯಕುಮಾರ್ ಕೊಣಕೇರಿ(23), ಮಾರಿಹಾಳ ನಿವಾಸಿ ರಾಜೇಸಾಬ್ ಮುಲ್ಲಾ(23) ಬಂಧನಕ್ಕೊಳಗಾದ ಆರೋಪಿಗಳು. ನಾಲ್ಕು ದಿನಗಳ ಹಿಂದೆ ಕೊಲೆಯಾದ ಮಹಾಂತೇಶ ಹಾಗೂ ಆರೋಪಿಗಳ ಮಧ್ಯೆ ಕ್ಷುಲ್ಲಕ ಕಾರಣಕ್ಕೆ ಗಲಾಟೆಯಾಗಿತ್ತು. ಈ ವೇಳೆ ಕೊಲೆಯಾದ ಮಹಾಂತೇಶ್ ರಾಜೇಸಾಬ್‌ಗೆ ಧಮ್ಕಿ ಹಾಕಿದ್ದನಂತೆ. ಇದೇ ವೈಷಮ್ಯವಿಟ್ಟುಕೊಂಡು ಇಬ್ಬರು ಆರೋಪಿಗಳನ್ನು ಹತ್ಯೆ ಮಾಡಿ, ಪರಾರಿಯಾಗಿದ್ರು.
ಮಾರಿಹಾಳ ಕೊಲೆ ಪ್ರಕರಣ ದಾಖಲಿಸಿಕೊಂಡ ಆರೋಪಿಗಳ ಪತ್ತೆಗೆ ಬಲೆಬೀಸಿದ್ದರು. ಜ್ಞಾನದೇಗುಲವಾದ ಶಾಲಾ ಆವರಣದಲ್ಲಿ ಈ ರೀತಿಯ ಘಟನೆ ನಡೆದಿದ್ದು ಗ್ರಾಮಸ್ಥರನ್ನು ಬೆಚ್ಚಿ ಬೀಳಿಸಿತ್ತು. ಇದೀಗ ನಡೆದು ಕೇವಲ 24 ಗಂಟೆಗಳ ಹಿಂದೆ ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy


