ಮೂಡಿಗೆರೆ: ಅಪರಿಚಿತ ವಾಹನ ಡಿಕ್ಕಿಯಾಗಿ ಕೋತಿ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಮೂಡಿಗೆರೆ ತಾಲೂಕಿನ ಚಾರ್ಮಾಡಿ ಘಾಟಿಯಲ್ಲಿ ನಡೆದಿದೆ.
ಸಾವನ್ನಪ್ಪಿದ ಕೋತಿಗೆ ಸ್ಥಳೀಯರು ಅಂತ್ಯಸಂಸ್ಕಾರ ನೆರವೇರಿಸಿ ಮಾನವೀಯತೆ ಮೆರೆದಿದ್ದಾರೆ. ಕೋತಿಗೆ ಡಿಕ್ಕಿ ಹೊಡೆದ ಅಪರಿಚಿತ ವಾಹನದ ಚಾಲಕ ವಾಹನ ನಿಲ್ಲಿಸದೇ ಸ್ಥಳದಿಂದ ಪರಾರಿಯಾಗಿದ್ದಾನೆ. ಅಪಘಾತದ ಪರಿಣಾಮ ರಸ್ತೆಯಲ್ಲೇ ಕೋತಿ ಸಾವನ್ನಪ್ಪಿತ್ತು.
ರಸ್ತೆಯಲ್ಲಿ ಮೃತಪಟ್ಟ ಮಂಗನಿಗೆ ಜಾವಳಿ ಗ್ರಾಮದ ಯುವಕರು ಅಂತ್ಯಸಂಸ್ಕಾರ ನೆರವೇರಿಸಿದ್ದಾರೆ. ಧಾರ್ಮಿಕ ವಿಧಿ–ವಿಧಾನದಂತೆ ಅಂತ್ಯಸಂಸ್ಕಾರ ನೆರವೇರಿಸಲಾಯಿತು.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/HirBanj7uz4I4A2vAG5yXx