ತುಮಕೂರು: ತುಮಕೂರು ದಸರಾ ಮಹೋತ್ಸವದ ಹಿನ್ನೆಲೆಯಲ್ಲಿ ಭಾನುವಾರ ಗೃಹ ಸಚಿವ ಡಾ.ಜಿ.ಪರಮೇಶ್ವರ್ ಚಾಲನೆ ನೀಡಿದರು.
ನಗರದ ಟೌನ್ ಹಾಲ್ ವೃತ್ತದಲ್ಲಿ ನಂದಿ ದ್ವಜಕ್ಕೆ ಪೂಜೆ ಸಲ್ಲಿಸುವ ಮೂಲಕ ಹಸಿರು ನಿಶಾನೆ ತೋರಿದರು. ಇದೆ ವೇಳೆ ಸಚಿವ ಸತೀಶ್ ಜಾರಕಿಹೊಳಿ, ಸಚಿವ ಪರಮೇಶ್ವರ್ ಪತ್ನಿ ಕನ್ನಿಕಾ, ಜಿಲ್ಲಾಧಿಕಾರಿ ಶುಭಾ ಕಲ್ಯಾಣ್ ಹಾಜರಿದ್ದರು. ಮೆರವಣಿಗೆಯಲ್ಲಿ ಜಂಬುಸವಾರಿಯ ಆನೆಗಳು, ವಿವಿಧ ಕಲಾತಂಡಗಳು ಭಾಗವಹಿಸಿದ್ದವು.
ನಗರದ ಟೌನ್ ಹಾಲ್ ವೃತ್ತದಲ್ಲಿ ಯುವ ದಸರಾಕ್ಕೆ ಚಾಲನೆ ಕೊಟ್ಟ ಡಾ. ಜಿ ಪರಮೇಶ್ವರ್ ಅವರೊಂದಿಗೆ ಸಚಿವ ಸತೀಶ್ ಜಾರಕಿಹೊಳಿ ಭಾಗವಹಿಸಿದ್ದು ವಿಶೇಷವಾಗಿತ್ತು.
ಅಲ್ಲದೆ ಸತೀಶ್ ಜಾರಕಿಹೊಳಿ ಅವರು ಯಾವುದೇ ರೀತಿಯ ಸಚಿವರಿಗೆ ನೀಡುವ ಎಸ್ಕಾರ್ಟ್ ಇಲ್ಲದೆ ಪರಮೇಶ್ವರ್ ಅವರೊಂದಿಗೆ ರಹಸ್ಯ ಮಾತುಕತೆ ನಡೆಸಿದ್ದಾರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Gp0Feftn1c40sYuKY8HX2Q