ತುಮಕೂರು: ಯುವಕನೋರ್ವನ ತಲೆಗೆ ಕಲ್ಲು ಎತ್ತಿ ಹಾಕಿ ಬರ್ಬರವಾಗಿ ಹತ್ಯೆ ನಡೆಸಿರುವ ಘಟನೆ ತುಮಕೂರಿನ ಹುರುಳಿ ತೋಟದ ಸಮೀಪ ಅಮಾನಿಕೆರೆಯ ಅಂಗಳದಲ್ಲಿ ಭಾನುವಾರ ಮಧ್ಯಾಹ್ನ 2:30ರ ಸುಮಾರಿಗೆ ನಡೆದಿದೆ.
ತುಮಕೂರಿನ ಎನ್.ಆರ್. ಕಾಲೋನಿಯ 25 ವರ್ಷ ವಯಸ್ಸಿನ ಮಂಜುನಾಥ್ ಹತ್ಯೆಗೀಡಾದ ವ್ಯಕ್ತಿಯಾಗಿದ್ದು, ಈತ ಪೈಂಟರ್ ಆಗಿ ಕೆಲಸ ಮಾಡುತ್ತಿದ್ದ ಎಂದು ತಿಳಿದು ಬಂದಿದೆ.
ಕೊಲೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಘಟನಾ ಸ್ಥಳಕ್ಕೆ ಭೇಟಿ ನೀಡಿರುವ ಪೊಲೀಸರು ನಗರ ಠಾಣೆಯ ಪೊಲೀಸರು ಭೇಟಿ ನೀಡಿ ಸ್ಥಳ ಮಹಜರು ಮಾಡಿದ್ದಾರೆ. ಘಟನೆ ಸಂಬಂಧ ಪ್ರಕರಣ ದಾಖಲಿಸಿಕೊಂಡು ಆರೋಪಿಗಳ ಬಂಧನಕ್ಕಾಗಿ ಪೊಲೀಸರು ಶೋಧ ನಡೆಸುತ್ತಿದ್ದಾರೆ.
ವರದಿ: ರಾಜೇಶ್ ರಂಗನಾಥ್, ತುಮಕೂರು
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy