ಕೊರಟಗೆರೆ: ದ್ವಿಚಕ್ರ ವಾಹನದಲ್ಲಿ ವಿವಿಧ ರಸ್ತೆಗಳಲ್ಲಿ ವ್ಹೀಲಿಂಗ್ ಮಾಡುತ್ತಾ, ಸಾರ್ವಜನಿಕರಿಗೆ ಕಾಟ ಕೊಡುತ್ತಿದ್ದ ಯುವಕರಿಗೆ ಕೊರಟಗೆರೆ ಜೆ.ಎಂ.ಎಫ್.ಸಿ ನ್ಯಾಯಾಲಯ ಬಿಸಿ ಮುಟ್ಟಿಸಿದ್ದು, ಯುವಕನೋರ್ವನಿಗೆ ದಂಡ ವಿಧಿಸಿದೆ.
ಬೈಕ್ ವೀಲಿಂಗ್ ಮಾಡುತ್ತಿದ್ದ ಕೊರಟಗೆರೆ ಪಟ್ಟಣದ ಮುತ್ತುರಾಜು ಬಿನ್ ಗಂಗರಾಜು ಎಂಬ ಯುವಕನಿಗೆ ಕೊರಟಗೆರೆ ಜೆ.ಎಂ.ಎಫ್.ಸಿ ನ್ಯಾಯಾಲಯ 7 ಸಾವಿರ ದಂಡ ವಿಧಿಸಿದ್ದು, ಈ ಮೂಲಕ ರಸ್ತೆಯಲ್ಲಿ ವ್ಹೀಲಿಂಗ್ ಮಾಡುತ್ತಾ, ತಮ್ಮ ಪ್ರಾಣಕ್ಕೆ ಅಪಾಯ ತಂದುಕೊಳ್ಳುವುದೇ ಅಲ್ಲದೇ, ಇತರರ ಪ್ರಾಣಕ್ಕೂ ಅಪಾಯ ಸೃಷ್ಟಿಸುತ್ತಿರುವ ಪುಂಡರಿಗೆ ಕಾನೂನಿನ ಬಿಸಿ ಮುಟ್ಟಿಸಲಾಗಿದೆ.
ಕೊರಟಗೆರೆ ವೃತ್ತ ನಿರೀಕ್ಷಕ ಸಿದ್ದರಾಮೇಶ್ವರರವರು, ವ್ಹೀಲಿಂಗ್ ಮಾಡುತ್ತಿದ್ದ ಯುವಕನ ವಾಹನ ಜಪ್ತಿ ಮಾಡಿದ್ದರು. ಇದೀಗ ಯುವಕನಿಗೆ ಕೊರಟಗೆರೆ ಜೆ.ಎಂ.ಎಫ್.ಸಿ ನ್ಯಾಯಾಲಯ 7 ಸಾವಿರ ದಂಡ ವಿಧಿಸಿದೆ.
ವರದಿ: ಮಂಜುಸ್ವಾಮಿ.ಎಂ.ಎನ್., ಕೊರಟಗೆರೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz