ಮಹಾರಾಷ್ಟ: ಇಲ್ಲಿನ ಥಾಣೆ ಜಿಲ್ಲೆಯ ಅಂಬರನಾಥದಲ್ಲಿ 21 ವರ್ಷದ ಯುವತಿ ಮೇಲೆ ಸ್ನೇಹಿತರೆ ಸಾಮೂಹಿಕ ಅತ್ಯಾಚಾರ ನಡೆಸಿರುವ ಘಟನೆ ನಡೆದಿದೆ. ಪ್ರಕರಣದ ಸಂಬಂಧಿಸಿದಂತೆ ಮೂವರು ಆರೋಪಿಗಳಿಗೆ ಶಿವಾಜಿನಗರ ಪೊಲೀಸರು ತಕ್ಷಣ ಕೈಕೋಳ ಹಾಕಿದ್ದಾರೆ.
ಭಾನುವಾರ ಮಧ್ಯಾಹ್ನ ಥಾಣೆ ಜಿಲ್ಲೆಯ ಅಂಬರನಾಥ್ನ ಜಿಐಪಿ ಅಣೆಕಟ್ಟು ಪ್ರದೇಶದಲ್ಲಿ ಈ ಘಟನೆ ನಡೆದಿದೆ. ಸಂತ್ರಸ್ತೆ ಅಂಬರನಾಥದ ಅಂಗಡಿಯೊಂದರಲ್ಲಿ ಕೆಲಸ ಮಾಡುತ್ತಿದ್ದಾರೆ. ಆಕೆಯ ಸ್ನೇಹಿತ ಹನುಮಾನ್ ಹಿಲಮ್ ತನ್ನ ಸ್ನೇಹಿತರಾದ ವಿಶ್ವಾಸ್ ಮಾಧವಿ ಮತ್ತು ಜಾವೇದ್ ಅನ್ಸಾರಿ ಅವರೊಂದಿಗೆ ಭಾನುವಾರ ಜಿಐಪಿ ಅಣೆಕಟ್ಟು ಪ್ರದೇಶದಲ್ಲಿ ಕುಡಿದು ಪಾರ್ಟಿ ಮಾಡುತ್ತಿದ್ದರು. ಇದೇ ವೇಳೆ ಹನುಮಂತ, ಜಿಐಪಿ ಅಣೆಕಟ್ಟೆ ಪ್ರದೇಶದಲ್ಲಿ ಸ್ನೇಹಿತೆಯನ್ನ ಅಲ್ಲಿಗೆ ಬರುವಂತೆ ಕರೆದಿದ್ದಾನೆ. ಕುಡಿದ ಮತ್ತಿನಲ್ಲಿ ಹನುಮಂತ ಆಕೆಯ ಮೇಲೆ ಬಲವಂತವಾಗಿ ಅತ್ಯಾಚಾರ ಎಸಗಿದ್ದಾನೆ.
ನಂತರ ಆಕೆಯ ಸ್ನೇಹಿತರಾದ ವಿಶ್ವಾಸ್ ಮತ್ತು ಜಾವೇದ್ ರ ಸಹ ಯುವತಿಯ ಮೇಲೆ ಅತ್ಯಾಚಾರವೆಸಗಿದ್ದಾರೆ. ಘಟನೆಯ ನಂತರ ಯುವತಿ ಶಿವಾಜಿನಗರ ಪೊಲೀಸ್ ಠಾಣೆಗೆ ಬಂದು ದೂರು ನೀಡಿದ್ದಾಳೆ. ಆಕೆಯ ದೂರಿನ ಮೇರೆಗೆ ಪೊಲೀಸರು ಕೂಡಲೇ ಸಾಮೂಹಿಕ ಅತ್ಯಾಚಾರ ಪ್ರಕರಣ ದಾಖಲಿಸಿಕೊಂಡು ಮೂವರನ್ನು ಪತ್ತೆ ಹಚ್ಚಿ ಬಂಧಿಸಿದ್ದಾರೆ.
ಮೂವರನ್ನು ಇಂದು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ಪ್ರಕರಣದ ವಿಚಾರಣೆ ನಡೆಯುತ್ತಿದೆ ಎಂದು ಶಿವಾಜಿನಗರ ಪೊಲೀಸ್ ಠಾಣೆಯ ಹಿರಿಯ ಪೊಲೀಸ್ ನಿರೀಕ್ಷಕ ಮಧುಕರ್ ಭೋಗೆ ತಿಳಿಸಿದ್ದಾರೆ.
ವರದಿ: ಆಂಟೋನಿ ಬೇಗೂರು
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy