ಬೆಂಗಳೂರು: ಹಸುವಿನ ಕೆಚ್ಚಲು ಕೊಯ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ವಸತಿ ಸಚಿವ ಜಮೀರ್ ಅಹಮದ್ ಖಾನ್ ಸಂತ್ರಸ್ತ ಕುಟುಂಬಕ್ಕೆ ಮೂರು ಹಸುಗಳನ್ನು ನೀಡಿದ್ದಾರೆ.
ವಿನಾಯಕ ನಗರದಲ್ಲಿ ಹಸುವಿನ ಕೆಚ್ಚಲು ಕೊಯ್ದ ಅಮಾನವೀಯ ಘಟನೆ ನಡೆದಿತ್ತು. ಈ ಘಟನೆಗೆ ಸಂಬಂಧಿಸಿದಂತೆ ಕೊಟ್ಟ ಮಾತಿನಂತೆಯೇ ಜಮೀರ್ ಖಾನ್ ನಡೆದುಕೊಂಡಿದ್ದು, 3 ಲಕ್ಷ ಮೌಲ್ಯದ ಮೂರು ಹಸುಗಳನ್ನು ಸಂತ್ರಸ್ತರ ಕುಟುಂಬಕ್ಕೆ ನೀಡಿದ್ದಾರೆ.
ಹಸುವಿನ ಮಾಲೀಕ ಕರ್ಣ ಅವರ ತಾಯಿ ಸವರಿ ಅಮ್ಮಳ್, ಸಹೋದರಿ ಅಮುದಾ ಅವರಿಗೆ ಸಚಿವ ಜಮೀರ್ ಅಹಮದ್ ಖಾನ್ ಅವರು ಮೂರು ಲಕ್ಷ ರೂ. ವೆಚ್ಚದಲ್ಲಿ ಮೂರು ಹಸು ಖರೀದಿಸಿ ಇಂದು ಹಸ್ತಾಂತರಿಸಿದ್ದಾರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/HirBanj7uz4I4A2vAG5yXx