ತುಮಕೂರು: ಮಹಿಳೆಯರು ಮತ್ತು ಮಕ್ಕಳು ಎಲ್ಲಾ ಹಂತದಲ್ಲೂ ದೌರ್ಜನ್ಯಕ್ಕೆ ಹಾಗೂ ತೊಂದರೆಗೆ ಒಳಗಾಗುವ ಸಮುದಾಯ ಎಂದು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಕೆ.ವಿದ್ಯಾಕುಮಾರಿ ಹೇಳಿದರು.
ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಇವರ ಸಂಯುಕ್ತಾಶ್ರಯದಲ್ಲಿ ಆಯೋಜಿಸಲಾಗಿದ್ದ ಜಿಲ್ಲಾಮಟ್ಟದ ಕಾರ್ಯಾಗಾರದಲ್ಲಿ ಮಾತನಾಡಿದ ಅವರು, ಸಮಾಜದಲ್ಲಿ ಮಹಿಳೆಯರಿಗೆ ಸಣ್ಣ ಪುಟ್ಟ ಆಮಿಷ ತೋರಿಸಿ ಮಹಿಳೆಯರ ಅಪಹರಣ ಪ್ರಕರಣ ನಡೆಯುತ್ತಿದೆ. ಮಹಿಳೆಯರ ಮತ್ತು ಮಕ್ಕಳ ಮಾರಾಟ ಜಾಲ ಬಹಳ ವ್ಯವಸ್ಥಿತವಾಗಿ ಸಂಚು ರೂಪಿಸುತ್ತಾ ಬರುತ್ತಿದೆ . ಇಂತಹ ಘಟನೆಗಳು ಸಾಕಷ್ಟು ಪ್ರಮಾಣದಲ್ಲಿ ನಡೆಯುತ್ತಿದ್ದರು ಬೆಳಕಿಗೆ ಬರುವುದಿಲ್ಲ ಎಂದರು.
ಪೋಲಿಸ್ ಠಾಣೆಗಳಲ್ಲಿ ಮಹಿಳೆಯರ ಮತ್ತು ಮಕ್ಕಳ ಕಾಣೆ ಬಗ್ಗೆ ಪ್ರಕರಣ ದಾಖಲಾದಾಗ ಮಾತ್ರ ಇಂತಹ ಪ್ರಕರಣಗಳು ಬೆಳಕಿಗೆ ಬರುತ್ತಿವೆ. ನಾವೆಲ್ಲರೂ ನಾಗರಿಕ ಸಮಾಜದಲ್ಲಿ ಇದ್ದು, 21 ನೇ ಶತಮಾನದಲ್ಲಿ ಇದ್ದರು ಕೂಡ ಇಂದಿಗೂ ಮಹಿಳೆಯರು ಮತ್ತು ಮಕ್ಕಳು ಇಂತಹ ಸ್ಥಿತಿಯಲ್ಲಿದ್ದಾರೆ ಎನ್ನುವುದು ಆಘಾತಕಾರಿ ವಿಚಾರ ಎಂದು ಅವರು ಆತಂಕ ವ್ಯಕ್ತಪಡಿಸಿದರು.
ಹಲವಾರು ಪ್ರಕರಣಗಳಲ್ಲಿ ಮಹಿಳೆಯರ ಮತ್ತು ಮಕ್ಕಳ ಮೇಲೆ ದೌರ್ಜನ್ಯ ಪ್ರಕರಣಗಳಲ್ಲಿ ಸರಿಯಾದ ಸಾಕ್ಷ್ಯಾಧಾರವಿಲ್ಲದೇ ಕಾನೂನು ಕ್ರಮದಿಂದ ತಪ್ಪಿತಸ್ಥರು ತಪ್ಪಿಸಿಕೊಳ್ಳುವಂತಹ ಸನ್ನಿವೇಶಗಳು ಸೃಷ್ಟಿಯಾಗುತ್ತಿವೆ. ಇಂತಹ ಘಟನೆಗಳು ನಡೆಯದಂತೆ ಸಾರ್ವಜನಿಕ ಸ್ಥಳಗಳಲ್ಲಿ ಹೆಚ್ಚಿನ ಮಟ್ಟದಲ್ಲಿ ಜಾಗೃತಿ ಮೂಡಿಸುವಂತ ಕೆಲಸವಾಗಬೇಕಾಗಿದೆ. ಮಹಿಳೆಯರ ಮತ್ತು ಮಕ್ಕಳ ರಕ್ಷಣೆಯ ಹೊಣೆ ನಮ್ಮೆಲ್ಲರ ಆದ್ಯ ಕರ್ತವ್ಯವಾಗಿದೆ ಎಂದು ತಿಳಿಸಿದರು.
ವರದಿ: ಮಾರುತಿ ಪ್ರಸಾದ್, ತುಮಕೂರು
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Co3qCxRDyz3FBQg7y8GfBB