ತುಮಕೂರು: ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಮಹತ್ವಾಕಾಂಕ್ಷಿ ಯೋಜನೆಯಾದ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ(ನರೇಗಾ)ಯನ್ನು ತುಮಕೂರು ಜಿಲ್ಲೆಯಲ್ಲಿ ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಿ ಗಣನೀಯವಾದ ಸಾಧನೆ ಮಾಡಿರುವುದಕ್ಕಾಗಿ ರಾಜ್ಯ ಸರ್ಕಾರವು “ಉದ್ಯೋಗ ಸೃಜನೆಯ ಅತ್ಯುತ್ತಮ ಜಿಲ್ಲಾ ಪುರಸ್ಕಾರ” ಹಾಗೂ ಕುಣಿಗಲ್ ತಾಲ್ಲೂಕು ಉಜ್ಜಿನಿ ಗ್ರಾಮ ಪಂಚಾಯತಿಗೆ “ಅತ್ಯುತ್ತಮ ಗ್ರಾಮ ಪಂಚಾಯತಿ ಪುರಸ್ಕಾರ” ರಾಜ್ಯ ಮಟ್ಟದ ಪ್ರಶಸ್ತಿ ನೀಡಿ ಗೌರವಿಸಿದೆ.
ಪ್ರಶಸ್ತಿ ಗೌರವಕ್ಕೆ ಜಿಲ್ಲೆಯು ಭಾಜನವಾಗಲು ಶ್ರಮಿಸಿದ ಜಿಲ್ಲಾ ಪಂಚಾಯತ್ ಕಾರ್ಯ ನಿರ್ವಾಹಕ ಅಧಿಕಾರಿ ಜಿ.ಪ್ರಭು ಹಾಗೂ ಅಧಿಕಾರಿ ಸಿಬ್ಬಂದಿ ವರ್ಗಕ್ಕೆ ಗೃಹ ಸಚಿವ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ.ಜಿ.ಪರಮೇಶ್ವರ ಅವರು ಅಭಿನಂದಿಸಿ ಹರ್ಷ ವ್ಯಕ್ತಪಡಿಸಿದ್ದಾರೆ.
ಜಿ.ಪ್ರಭು ಅವರು ಬೆಂಗಳೂರಿನ ಸದಾಶಿವನಗರದ ನಿವಾಸದಲ್ಲಿ ಸಚಿವರನ್ನು ಭೇಟಿಯಾದ ಸಂದರ್ಭದಲ್ಲಿ ಪ್ರಶಸ್ತಿ ಗೌರವದ ಮಾಹಿತಿ ಹಂಚಿಕೊಂಡರು.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Bc4BbJiZ9pF3L0M4QgZdQ4