ನವದೆಹಲಿ: ಸರ್ಕಾರಿ ಉದ್ಯೋಗಗಳ ಬಡ್ತಿಯಲ್ಲಿ ಪರಿಶಿಷ್ಟ ಜಾತಿ(SC) ಪರಿಶಿಷ್ಟ ಪಂಗಡ(ST) ನೌಕರರಿಗೆ ಮೀಸಲಾತಿ ನೀಡಬೇಕು ಎಂಬ ವಿಚಾರಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ತೀರ್ಪನ್ನು ಕಾಯ್ದಿರಿಸಿದೆ.
ನ್ಯಾಯಮೂರ್ತಿಗಳಾದ ನಾಗೇಶ್ವರ ರಾವ್, ಸಂಜೀವ ಖನ್ನಾ ಹಾಗೂ ಬಿ.ಆರ್.ಗವಾಯಿ ಇವರಿರುವ ನ್ಯಾಯಪೀಠ ಈ ಅರ್ಜಿಯ ವಿಚಾರಣೆ ನಡೆಸಿ ತೀರ್ಪನ್ನು ಕಾಯ್ದಿರಿಸಿದೆ.

ಗ್ರೂಪ್ ‘ಎ’ ನಂತಹ ಉನ್ನತ ಹುದ್ದೆಗೇರುವುದು ಎಸ್ಸಿ ಹಾಗೂ ಎಸ್ಟಿ ನೌಕರರಿಗೆ ಬಹಳ ಕಷ್ಟ. ಇಂತಹ ಉನ್ನತ ಹುದ್ದೆಗಳಿಗೆ ಎಸ್ಟಿ, ಎಸ್ಟಿ ಹಾಗೂ ಒಬಿಸಿ ನೌಕರರನ್ನು ಭರ್ತಿ ಮಾಡುವುದಕ್ಕೆ ಅನುಕೂಲ ಕಲ್ಪಿಸುವಂತಹ ವಾಸ್ತವದಿಂದ ಕೂಡಿದ ಆಧಾರವನ್ನು ಸುಪ್ರೀಂಕೋರ್ಟ್ ಒದಗಿಸಬೇಕು ಎಂದು ಅಟಾರ್ನಿ ಜನರಲ್ ಕೆ.ಕೆ.ವೇಣುಗೋಪಾಲ್ ನ್ಯಾಯಾಲಯಕ್ಕೆ ಮನವಿ ಮಾಡಿಕೊಂಡರು.
ಇನ್ನೂ ಹೆಚ್ಚುವರಿ ಸಾಲಿಸಿಟರ್ ಜನರಲ್ ಬಲ್ಬೀರ್ ಸಿಂಗ್ ಹಾಗೂ ವಿವಿಧ ರಾಜ್ಯಗಳನ್ನು ಪ್ರತಿನಿಧಿಸುತ್ತಿದ್ದ ಹಿರಿಯ ವಕೀಲರು ಸಹ ವಾದ ಮಂಡಿಸಿದರು.